ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.
ಏ. 9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭೆಗೆ ಚುನಾವಣೆ ನಡೆಸಿ, ಮೇ 4ರಂದು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಬಾಗಲಕೋಟೆಯಲ್ಲಿ ಶಾಸಕ ಎಚ್.ವೈ. ಮೇಟಿ ನಿಧನ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದೆ. ಎರಡು ಕ್ಷೇತ್ರದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳಿಂದ ಕ್ಷೇತ್ರ ತೆರವಾಗಿದ್ದು, ಕ್ಷೇತ್ರ ಉಳಿಸಿಕೊಳ್ಳಲು ಆಡಳಿತ ಪಕ್ಷ ಕಾಂಗ್ರೆಸ್ ಯತ್ನಿಸುತ್ತಿದೆ.







