Murder Case Image of murder symbol

Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಶೆಡ್‌ನಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿಯಲ್ಲಿ ನಡೆದಿದೆ.

ಸಿಂಗಹಳ್ಳಿ ಗ್ರಾಮದ ಬಳಿ ಎಸ್‌ಆರ್‌ಎಸ್ ಟ್ರಾವೆಲ್ಸ್ ಬಸ್‌ಗಳ ಪಾರ್ಕ್‌ ಮಾಡುವ ಜಾಗದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿದೆ. ಮೃತರನ್ನು ಖಾಸಗಿ ಬಸ್ ಕ್ಲೀನರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಗೇಶ್ (55) ಹಾಗೂ ಮಂಜುನಾಥ್ (50) ಎಂದು ಗುರುತಿಸಲಾಗಿದೆ.

ಕಳೆದ ರಾತ್ರಿ ಇಬ್ಬರೂ ಕುಡಿದಿದ್ದು, ಗಲಾಟೆ ಮಾಡಿಕೊಂಡು ಪರಸ್ಪರ ಹೊಡೆದಾಡಿ ಮೃತಪಟ್ಟಿದ್ದಾರೋ ಅಥವಾ ಬೇರೆ ಯಾರೋ ಕೊಲೆ ಮಾಡಿ ಪರಾರಿಯಾಗಿದ್ದಾರೋ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ