ತುಮಕೂರು : ಪಟ್ಟಣಗೆರೆ ಶೆಡ್ ನಲ್ಲಿ ನಡೆದ ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ಶೆಡ್ ನಲ್ಲಿ ಮಲಗಿದ್ದ ಸ್ನೇಹಿತನೊಬ್ಬನ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ (Murder case) ತುಮಕೂರಿನ ಕುಣಿಗಲ್ ಪಟ್ಟಣದ ಅಗ್ರಹಾರದಲ್ಲಿ ಸಂಭವಿಸಿದೆ.
ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
Join Our Telegram: https://t.me/dcgkannada
ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರವಿ, ಭಾನುವಾರ ತನ್ನ ಆಪ್ತ ಸ್ನೇಹಿತ ಶಿವಕುಮಾರ್ ನ ಶೆಡ್ ಗೆ ಹೋಗಿದ್ದನು. ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ನಂತರ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ಹೋಗಿದೆ.
ಇದನ್ನೂ ಓದಿ: B.Y Vijayendra: ಪ್ರತಿ ಹೆಕ್ಟೇರ್ ಗೆ ₹50 ಸಾವಿರ ಪರಿಹಾರ ನೀಡಿ: ಸರ್ಕಾರಕ್ಕೆ B.Y ವಿಜಯೇಂದ್ರ (ವಿಡಿಯೋ ನೋಡಿ)
ಶಿವಕುಮಾರ್, ರವಿ ಮಲಗಿರುವುದನ್ನು ನೋಡಿ ತಲೆಯ ಮೇಲೆ ಹಾಲೋಬ್ರಿಕ್ಸ್ ಇಟ್ಟಿಗೆ ಎತ್ತಿ ಹಾಕಿ ಕೊಲೆ (Murder case) ಮಾಡಿದ್ದಾನೆ ಎನ್ನಲಾಗಿದೆ. ಸದ್ಯ, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.