Murder Case Image of murder symbol

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

Murder Case: ವಿಚ್ಛೇದನ‌ ಕೇಳಿದ ಪತ್ನಿ.. ದೇಗುಲಕ್ಕೆ ಕರೆದುಕೊಂಡು ಹೋಗಿ ಹತ್ಯೆಗೈದ ಪತಿ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದಲೇ ಪತ್ನಿ ಹತ್ಯೆಯಾಗಿರುವ (Murder Case) ಘಟನೆ ಮಾಗಡಿ ತಾಲೂಕಿನ ಹೂಜಗಲ್ಲು ಬೆಟ್ಟದಲ್ಲಿ ಮಂಗಳವಾರ ನಡೆದಿದ್ದು, ತಡವಾಗಿ ವರದಿಯಾಗಿದೆ.

ಹತ್ಯೆಯಾದ ಮಹಿಳೆಯನ್ನು 32 ವರ್ಷದ ದಿವ್ಯಾ ಎಂದು ಗುರುತಿಸಲಾಗಿದೆ. ಹತ್ಯೆ ಆರೋಪಿ ಪತಿಯನ್ನು ಉಮೇಶ್ ಎನ್ನಲಾಗಿದೆ.

Join Our Telegram: https://t.me/dcgkannada

ಮದುವೆಯಾಗಿ ಕೆಲವು ವರ್ಷಗಳು ಜೀವನ ನಡೆಸಿದ ಇಬ್ಬರ ನಡುವೆ ಇತ್ತೀಚೆಗೆ ಮನಸ್ತಾಪ ಉಂಟಾಗಿದೆ. ಇದರಿಂದ ನನಗೆ ಡಿವೋರ್ಸ್ ಕೊಟ್ಟುಬಿಡಿ ನಾನು ಬೇರೆ ಜೀವನ ಕಟ್ಟಿಕೊಳ್ಳುತ್ತೇನೆ ಎಂದು ದಿವ್ಯಾ ಕೇಳಿದ್ದಾಳೆ. ಆಗ ಉಮೇಶ್ ಹೆಂಡತಿಯನ್ನು ಸಮಾಧಾನಪಡಿಸಿ ಬುದ್ದಿ ಹೇಳಿದ್ದ ಆದರೆ, ಇದ್ಯಾವುದನ್ನೂ ಕೇಳದ ದಿವ್ಯಾಳಿಗೆ ಉಮೇಶ್ ಡಿವೋರ್ಸ್ ಕೊಡುವುದಾಗಿ ಹೇಳಿದ್ದಾನೆ.

ಡಿವೋರ್ಸ್ ಕೇಸ್ (Divorce Case) ಸಂಬಂಧಿಸಿದಂತೆ ಮಂಗಳವಾರ ಮಾಗಡಿ ಕೋರ್ಟ್‌ಗೆ ದಂಪತಿ ಹಾಜರಾಗಿ ವಿಚಾರಣೆಯನ್ನು ಎದುರಿಸಿದ್ದರಂತೆ. ಇನ್ನು ಹೆಂಡತಿಗೆ ಒಲ್ಲದ ಮನಸ್ಸಿನಿಂದ ಡಿವೋರ್ಸ್ ಕೊಡಲು ಮುಂದಾಗಿದ್ದನಂತೆ ಉಮೇಶ್.

ಇದನ್ನೂ ಓದಿ: BPL Card: ಬಿಪಿಎಲ್ ಕಾರ್ಡ್, ಗ್ಯಾರಂಟಿ ಯೋಜನೆ ರದ್ದು? ಸಚಿವ ಎಂ.ಬಿ.ಪಾಟೀಲ ಕ್ಲಾರಿಟಿ

ನ್ಯಾಯಾಲಯದಿಂದ ಮನೆಗೆ ವಾಪಸ್ ಹೋಗುವ ಮೊದಲು ದೇವಸ್ಥಾನಕ್ಕೆ ಹೋಗಿ ಬರೋಣ ಎಂದು ಹೇಳಿ ಹೆಂಡತಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದಾನೆ. ದೇವಸ್ಥಾನದಲ್ಲಿ ದಿವ್ಯಾ ಪೂಜೆ ಮಾಡುತ್ತಿರುವಾಗಲೇ ಆಕೆಯನ್ನು ಹತ್ಯೆ (Murder Case) ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಅಲ್ಲಿಂದ ಮೃತದೇಹವನ್ನು ಚೀಲೂರು ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ ಎ‌ನ್ನಲಾಗಿದೆ.

ಇನ್ನು ಅರಣ್ಯದಲ್ಲಿ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಜಾಡು ಹಿಡಿದು ಹೊರಟ ಪೊಲೀಸರು ಶವದ ಗುರುತು ಪತ್ತೆ ಮಾಡಿದ್ದಾರೆ. ನಂತರ, ಆಕೆಯ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಕುರಿತಂತೆ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ