Nadahabba dasara: Gajapade marched towards Mysore

Nadahabba dasara: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

Nadahabba dasara: ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

ಮೈಸೂರು: ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ (Nadahabba dasara) ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

Join Our Telegram: https://t.me/dcgkannada

ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ:ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಅಲ್ಲದೆ, ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು.

ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ

ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

ಇದನ್ನೂ ಓದಿ: Viral news: ಹಾವನ್ನೇ ಕಚ್ಚಿ ಸಾಯಿಸಿದ ಒಂದು ವರ್ಷದ ಕೂಸು..!

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು