Nadahalli demands apology from CM, Home Minister

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು.

ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ ಪವಿತ್ರ ಭಾವನೆಯಿಂದ ಕಾಣಲಾಗುತ್ತಿದೆ. ಆದರೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತಗೆಯಿಸಿರುವ ಕ್ರಮ ತೀವ್ರ ಖಂಡನೀಯವಾಗಿದ್ದು ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿರುವ ಬೀದರ್, ಧಾರವಾಡ, ಶಿವಮೊಗ್ಗ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೂ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಹಿಂದೂ ಧರ್ಮೀಯರ ಆಚರಣೆಗಳು, ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಅವಮಾನಕರ ರೀತಿಯಲ್ಲಿ ನಡೆದುಕೊಳ್ಳುತ್ತಿದೆ. ಸಂವಿಧಾನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇದ್ದು ಅದನ್ನು ಕಿತ್ತುಕೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಹಿಂದೂಗಳೇನು ಭಯೋತ್ಪಾದಕರೇ ಎಂದು ಖಾರವಾಗಿಅಂತಹ ಘಟನೆಗಳಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮಾಜಿ ಸೈನಿಕ ಎಸ್. ಆರ್. ಕುಲಕರ್ಣಿ ಮಾತನಾಡಿ, ಜನಿವಾರವನ್ನು ತಗೆದಿರುವ ಉದ್ದೇಶವನ್ನು ವಿಚಾರಿಸಿದಾಗ ಅದರಿಂದ ಪರೀಕ್ಷೆಯಲ್ಲಿ ನೇಣು ಹಾಕಿಕೊಂಡರೆ ಎಂದು ಅಪಹಾಸ್ಯ ಮಾಡುವಂತಹ ದಾಷ್ಟತ್ಯೆ ಅಲ್ಲಿನ ಸಿಬ್ಬಂದಿ ತೋರಿದ್ದು ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಬಿ. ಪಿ. ಕುಲಕರ್ಣಿ, ವಾಸುದೇವ ಶಾಸ್ತ್ರಿ ಮಾತನಾಡಿದರು. ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಆನಂದ ತುಪ್ಪದ, ಜನಿವಾರ ಸಮಾಜ ಪ್ರತಿನಿಧಿಸುವ 18 ಸಮಾಜಗಳ ಪ್ರತಿನಿಧಿಗಳು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ