ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ತಾಲ್ಲೂಕಿನ ನಾಗರಬೆಟ್ಟದ ಬೆಟ್ಟದ ಪಕ್ಕದಲ್ಲಿರುವ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಜ.5 ರಂದು ರಿ ಟ್ಯಾಲೆಂಟ್ ಅವಾರ್ಡ್-2025 ಪರೀಕ್ಷೆ ನಡೆಯಲಿದೆ.
ಈ ಕುರಿತು ಡಿಸಿಜಿ ನ್ಯೂಸ್‌ನೊಂದಿಗೆ ಮಾಹಿತಿ ಹಂಚಿಕೊAಡಿರುವ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಅವರು, ಡಿ.22, ರಂದು ಟ್ಯಾಲೆಂಟ್ ಸರ್ಚ್ ಸ್ಕಾಲರಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅಂದು 3555 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಆದರೆ ಸಂಸ್ಥೆ ನಿಗದಿಪಡಿಸಿದ್ದ ಶೇಕಡವಾರು ಅಂಕ ಗಳಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸಾಧ್ಯವಾಗಿರಲಿಲ್ಲ.ಆದರೆ ಸಂಸ್ಥೆಯವರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿ 3555 ವಿದ್ಯಾರ್ಥಿಗಳ ಪೈಕಿ ಮೊದಲ 200 ಸ್ಥಾನ ಪಡೆದುಕೊಂಡ ವಿದ್ಯಾರ್ಥಿಗಳನ್ನು ಮರು ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.
ಅದರಲ್ಲಿ 80 ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆಯಡಿ ಆಯ್ಕೆ ಮಾಡಲಾಗುತ್ತದೆ.ಅದರಲ್ಲಿ ಮೊದಲ 1-20 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷ ಸಂಪೂರ್ಣ ಊಟ, ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ. 20-40 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದವರೆಗಿನ ಉಚಿತ ಶಿಕ್ಷಣ ನೀಡಲಾಗುತ್ತದೆ(ವಸತಿ,ಊಟಕ್ಕೆ ಶುಲ್ಕ ನೀಡಬೇಕು),40-60 ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 90 ಸಾವಿರ ರೂ.ರಿಯಾಯಿತಿ ನೀಡಲಾಗುತ್ತದೆ. 60-80 ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶುಲ್ಕದಲ್ಲಿ 25 ಸಾವಿರ ರೂ.ರಿಯಾಯಿತಿ ನೀಡಲು ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಜ.5ರಂದು ಬೆಳಗ್ಗೆ 11 ಗಂಟೆಗೆ ಆಯ್ಕೆಯಾದ 200 ವಿದ್ಯಾರ್ಥಿಗಳನ್ನು ಕರೆಯಿಸಿ ರಿ ಟ್ಯಾಲೆಂಟ್ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಂಸ್ಥೆಯಿAದ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್ ತಿಳಿಸಿದ್ದಾರೆ.