ಮುದ್ದೇಬಿಹಾಳ : ತಾಲ್ಲೂಕಿನ ಮಹತ್ವಾಕಾಂಕ್ಷೆ ನೀರಾವರಿ ಯೋಜನೆಗಳಲ್ಲಿ ಒಂದಾಗಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಎಲ್ಲ ಕೆಲಸಗಳನ್ನು 2026ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದಿರುವ ಚಳಿಗಾಲದ ಅಧಿವೇಶನದಲ್ಲಿ ಮುದ್ದೇಬಿಹಾಳ ಶಾಸಕ ಸಿ.ಎಸ್.ನಾಡಗೌಡ ಅವರು ಕೇಳಿದ 53ನೇ ಚುಕ್ಕೆ ಗುರುತಿನ ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದ ಪ್ರಶ್ನೆಗೆ ಉತ್ತರಿಸಿರುವ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ ಅವರು, ಮುದ್ದೇಬಿಹಾಳ ತಾಲ್ಲೂಕಿನ 3200 ಹೆಕ್ಟೇರ್ ನೀರಾವರಿ ವಂಚಿತ ಕ್ಷೇತ್ರಕ್ಕೆ ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಕೃಷ್ಣಾ ನದಿ ನೀರನ್ನು ಎತ್ತಿ ನೀರಾವರಿಗೊಳಪಡಿಸುವ ನಾಗರಬೆಟ್ಟ ಏತ ನೀರಾವರಿ ಯೋಜನೆ 170.70 ಕೋಟಿ ರೂ.ಅಂದಾಜು ಮೊತ್ತಕ್ಕೆ ಸೆ.12,2017ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು ಯೋಜನೆಯನ್ನು ಮೂರು ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗಿತ್ತದೆ ಎಂದು ತಿಳಿಸಿದ್ದಾರೆ.
ಪ್ಯಾಕೇಜ್-1ರಲ್ಲಿ ಮುಖ್ಯಸ್ಥಾವರ ಮತ್ತು ಎಲೆಕ್ಟೊçÃ(ELECTRO) ಮೆಕ್ಯಾನಿಕಲ್ ಟರ್ನ್ಕೀ(TURN KEY) ಆಧಾರಿತ ಕಾಮಗಾರಿ 49.39 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು ನವೆಂಬರ್ 2025ರ ವರೆಗೆ ಆರ್ಥಿಕ ಪ್ರಗತಿ 48.64 ಕೋಟಿ ರೂ.ಗಳಾಗಿದೆ.ಕಾಮಗಾರಿ ಪೂರ್ಣಗೊಂಡಿದ್ದು ಅ.25,2023ರಂದು ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗಿದೆ.ಪ್ರಸ್ತುತ ನಿರ್ವಹಣಾ ಹಂತದಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಪ್ಯಾಕೇಜ್-2 ರಲ್ಲಿ 3200 ಹೆಕ್ಟೇರ್‌ಗೆ ನೀರಾವರಿ ಒದಗಿಸುವ ಕಾಲುವೆ ಜಾಲದ ಕಾಮಗಾರಿ ಒಟ್ಟು 54.25ಕಿ.ಮೀ ಪೈಕಿ 50.40 ಕಿ.ಮೀ ಉದ್ದದ ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ 3.85 ಕಿ.ಮೀ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ಯಾಕೇಜ್ ನಂ-3ರಲ್ಲಿ 30.70 ಕಿ.ಮೀ ಉದ್ದ ಅಚ್ಚುಕಟ್ಟು ರಸ್ತೆ ಕಾಮಗಾರಿ ಪೈಕಿ 27.ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಪೂರ್ಣಗೊಂಡಿದ್ದು ಬಾಕಿ ಉಳಿದಿರುವ 3.70 ಕಿ.ಮೀ ಉದ್ದದ ರಸ್ತೆಯ ಪೈಕಿ 2 ಕಿ.ಮೀ ರಸ್ತೆಯ ಜಿ.ಎಸ್.ಬಿ ಕೆಲಸ ಪೂರ್ಣಗೊಂಡಿರುತ್ತದೆ.ಬಾಕಿ ಉಳಿದ 1.70 ಕಿ.ಮೀ ರಸ್ತೆಯನ್ನು ರೈತರ ಮನವೊಲಿಸಿ ಮಾರ್ಚ್ 2026ರೊಳಗಾಗಿ ಪೂರ್ಣಗೊಳಿಸಲು ಕ್ರಮ ಜರುಗಿಸಲಾಗುವುದು ಎಂದು ಸಚಿವರು ವಿಧಾನಸಭೆಯಲ್ಲಿ ಒದಗಿಸಿದ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ. –NEWS BY: HEBBAL PUBLICITY



