ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ನಾಲತವಾಡ ಪ.ಪಂ ಅಧ್ಯಕ್ಷ ಸ್ಥಾನ: ಲಲಿತಾ ಗೊರಬಾಳ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಎರಡನೇ ಅವಧಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾಗಿದ್ದ ಸಾಮಾನ್ಯ ಮಹಿಳೆ ಸ್ಥಾನಕ್ಕೆ ಲಲಿತಾ ಮುತ್ತುಗೌಡ ಗೊರೆಬಾಳ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮೊದಲನೇ ಅವಧಿಯ 15 ತಿಂಗಳ ಕಾಲ ಅಧ್ಯಕ್ಷರಾಗಿದ್ದ ವಿಜಯಲಕ್ಷಿö್ಮÃ ಇಲಕಲ್ ಅವರು ರಾಜೀನಾಮೆ ನೀಡಿದ್ದರು.ಒಟ್ಟು 14 ಸದಸ್ಯರ ಬಲ ಹೊಂದಿದ ಪ.ಪಂ.ನ ಮಹಿಳಾ ಮೀಸಲಾತಿಗೆ ನಾಲ್ವರು ಸದಸ್ಯರಿಗೆ ಅಧ್ಯಕ್ಷರಾಗುವ ಅರ್ಹತೆ ಇತ್ತು.ಆದರೆ ಶಾಸಕ ಸಿ.ಎಸ್.ನಾಡಗೌಡ , ಪ.ಪಂ ಮಾಜಿ ಅಧ್ಯಕ್ಷ,ಹಾಲಿ ಸದಸ್ಯ ಪೃಥ್ವಿರಾಜ್ ನಾಡಗೌಡ ಅವರ ನಿರ್ದೇಶನದಂತೆ ಗೊರಬಾಳ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ.ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅಧಿಕಾರ ಒಪ್ಪಂದ ಸೂತ್ರದಂತೆ ಲಲಿತಾ ಗೊರೆಬಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಭಾರ ತಹಶೀಲ್ದಾರ್,ಚುನಾವಣಾಧಿಕಾರಿ ಎ.ಡಿ.ಅಮರವಾಡಗಿ ಘೋಷಿಸಿದರು.

ವಿಜಯೋತ್ಸವ:
ಪ.ಪಂ ಅಧ್ಯಕ್ಷರಾಗಿ ಲಲಿತಾ ಗೊರಬಾಳ ಅವರು ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಪಂಚಾಯತಿಯ ಎದುರಿಗೆ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಪ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪೃಥ್ವಿರಾಜ್ ನಾಡಗೌಡ, ಮಾಜಿ ಅಧ್ಯಕ್ಷೆ ವಿಜಯಲಕ್ಷಿö್ಮÃ ಇಲಕಲ್, ಉಪಾಧ್ಯಕ್ಷ ಬಸವರಾಜ ಗಂಗನಗೌಡ್ರ, ಸದಸ್ಯರಾದ ಜಗದೀಶ ಡೇರೇದ, ಡಾ.ಎಸ್.ಬಿ.ಗಂಗನಗೌಡ್ರ, ಅಮರಪ್ಪ ಬಾರಡ್ಡಿ, ಬಾಬು ಕ್ಷತ್ರಿ, ರಮೇಶ ಆಲಕೊಪ್ಪರ, ಶಿವಪುತ್ರಪ್ಪ ಗುರಿಕಾರ, ಅಮರಪ್ಪ ಸೀರಿ, ಬಸೀರಾಬೇಗಂ ಮೂಲಿಮನಿ, ಯಮನವ್ವ ಗೌಂಡಿ, ರಾಜಬಿ ನಾಡದಾಳ, ನೀಲಪ್ಪ ಸಿದ್ದಾಪೂರ, ರುದ್ರಗಂಟಿ, ಪ.ಪಂ ಸಿಓ ಈರಣ್ಣ ಕೊಣ್ಣೂರ, ಮುತ್ತುಗೌಡ ಗೊರಬಾಳ, ವಿದ್ಯಾ ಗೊರಬಾಳ ಹಾಗೂ ಸಹಾಯಕ ಚುನಾವಾಧಿಕಾರಿಯಾಗಿದ್ದ ಉಪ ತಹಶೀಲ್ದಾರ ನಿಂಗಪ್ಪ ದೊರೆ, ಕಂದಾಯ ನಿರೀಕ್ಷಕ ವೆಂಕಟೇಶ ಅಂಬಿಗೇರ, ಗ್ರಾಮ ಆಡಳಿತಾಧಿಕಾರಿ ಸಚಿನ್ ಗೌಡರ, ಮಹೇಶ ಪಾಟೀಲ, ರವಿ ಮಡಿವಾಳರ, ಕಾರ್ತಿಕ ಪತ್ತಾರ, ಮುತ್ತಣ್ಣ ತಳವಾರ, ಮೈಬೂಬ ನಾಡದಾಳ ಇದ್ದರು.
ಪೋಲಿಸ್ ಬಂದೋಬಸ್ತ: ಚುನಾವಣಾ ವೇಳೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಎಎಸ್‌ಐ ಎ.ವೈ.ಸಾಲಿ, ಪುಂಡಲೀಕ ಲಮಾಣಿ, ಶಾಂತಗೌಡ ಬನ್ನಟ್ಟಿ, ಎಚ್.ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೊಳ್ಳಿ ಭದ್ರತೆ ವಹಿಸಿದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ