ಪಾಟೀಲ್,ಅಂಗಡಿ ಪುನರಾಯ್ಕೆ: ನಾಲತವಾಡ : ಶರಣ ವೀರೇಶ್ವರ ಸಹಕಾರ ಬ್ಯಾಂಕ್‌ಗೆ ಅವಿರೋಧ ಆಯ್ಕೆ

ಪಾಟೀಲ್,ಅಂಗಡಿ ಪುನರಾಯ್ಕೆ: ನಾಲತವಾಡ : ಶರಣ ವೀರೇಶ್ವರ ಸಹಕಾರ ಬ್ಯಾಂಕ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ನಾಲತವಾಡ ಪಟ್ಟಣದ ಶರಣ ವೀರೇಶ್ವರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 13 ಸ್ಥಾನದ ನಿರ್ದೇಶಕರ ಮಂಡಳಿ ಚುನಾವಣೆ ಇದೇ 29ರಂದು ನಡೆಯಬೇಕಿತ್ತು. ಆದರೆ ಸೋಮವಾರ ಎಂ.ಎಸ್.ಪಾಟೀಲ ಹಾಗೂ ವಕೀಲ ಬಿ.ಎಂ.ತಾಳಿಕೋಟಿ ಅವರು ಕಣದಲ್ಲಿ ಉಳಿದಿದ್ದ 9 ಅಭ್ಯರ್ಥಿಗಳನ್ನು ತಮ್ಮ ನಾಮಪತ್ರ ಹಿಂಪಡೆಯುವAತೆ ಮನವೊಲಿಸಿ ನಿರ್ದೇಶಕರ ಅವಿರೋಧ ಆಯ್ಕೆಗೆ ಕಸರತ್ತು ಮಾಡಿದ್ದಾರೆ.

7 ಸಾಮಾನ್ಯ ಮೀಸಲು ಕ್ಷೇತ್ರದಿಂದ ಬಸವರಾಜ ತಾಳಿಕೋಟಿ, ಮಹಾಂತಪ್ಪಗೌಡ ಪಾಟೀಲ, ಮಲ್ಲಿಕಾರ್ಜುನ ಅಂಗಡಿ, ಗುರುಸಂಗಪ್ಪ ಗಡೇದ, ಬಸವಂತಪ್ಪ ಗಂಗನಗೌಡರ, ಶಂಕ್ರಪ್ಪ ನಾಗರದಿನ್ನಿ, ಶಿವಪುತ್ರಯ್ಯ ಸ್ಥಾವರಮಠ ಅವರು ಆಯ್ಕೆಯಾದರೆ, ಪ್ರವರ್ಗ ‘ಅ’ ಮೀಸಲು ವರ್ಗದಿಂದ ಖಾಜಾಹುಸೇನ ಎತ್ತಿನಮನಿ, ಪ್ರವರ್ಗ ‘ಬಿ’ ಮೀಸಲು ವರ್ಗದಿಂದ ಸಂಗಣ್ಣ ಹಡಲಗೇರಿ, ಪರಿಶಿಷ್ಟ ಜಾತಿ ವರ್ಗದಿಂದ ಬಸವರಾಜ ತಿರುಮುಖಿ, ಪರಿಶಿಷ್ಟ ಪಂಗಡ ವರ್ಗದಿಂದ ಬಾಲಪ್ಪ ಹಟ್ಟಿ, ಮಹಿಳಾ ಮೀಸಲು ವರ್ಗದಿಂದ ಸುಮಿತ್ರಾ ದೇಶಮುಖ, ಭಾರತಿ ಪಾಟೀಲ (ಮೇಟಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಆರ್.ಎಲ್.ಧಮ್ಮೂರಮಠ ತಿಳಿಸಿದ್ದಾರೆ.ವ್ಯವಸ್ಥಾಪಕ ನಾಗರಾಜ ಗಂಗನಗೌಡರ ಇದ್ದರು.

Latest News

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮಕ್ಕಳ ಮನಸ್ಸಿನಲ್ಲಿ ದೇಶಪ್ರೇಮದ ಬೀಜ ಬಿತ್ತಿ : ಅಶೋಕ ಮಣಿ

ಮುದ್ದೇಬಿಹಾಳ : ಮಕ್ಕಳ ಮನಸ್ಸಿನಲ್ಲಿ ಬಾಲ್ಯದಿಂದಲೇ ದೇಶಪ್ರೇಮದ ಬೀಜ ಬಿತ್ತಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್