Nandini ghee: Tirupati laddu effect.. Use Nandini ghee in state too: Govt

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

Nandini ghee: ತಿರುಪತಿ ಲಡ್ಡು ಎಫೆಕ್ಟ್.. ರಾಜ್ಯದಲ್ಲಿಯೂ ನಂದಿನಿ ತುಪ್ಪವನ್ನೇ ಬಳಸಿ: ಸರ್ಕಾರ

ಬೆಂಗಳೂರು: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಅಂತ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ದೇಶ ವ್ಯಾಪಿ ಸುದ್ದಿಯಾದ ಬೆನ್ನಲ್ಲೇ ಜಾಗ್ರತೆ ವಹಿಸಿರುವ ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ (Nadini ghee) ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಅನ್ನೋದನ್ನು ಟಿಟಿಡಿ ಒಪ್ಪಿಕೊಂಡಿದೆ. ಲಡ್ಡುಗೆ ಬಳಸಲಾಗಿರುವ ಕಚ್ಚಾವಸ್ತುಗಳ ಲ್ಯಾಬ್ ವರದಿ ಬಯಲಾಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿದ್ದ ಟಿಟಿಡಿ ಎಕ್ಸಿಕ್ಯೂಟಿವ್ ಅಧಿಕಾರಿ ಶ್ಯಾಮಲಾ ರಾವ್, ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಅದೇ ರೀತಿಯಾಗಿ ತಿರುಪತಿಯಲ್ಲಿ ತಯಾರಾಗುವ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ ನಡೆಸಲಾಗಿದೆ. ಆ ತುಪ್ಪದಲ್ಲಿ ಮೀನಿನ ಎಣ್ಣೆ, ಪಾಮ್ ಆಯಿಲ್ ಪತ್ತೆಯಾಗಿದೆ. ಅಚ್ಚರಿ ಏನಂದ್ರೆ.. ದನದ ಮಾಂಸದಿಂದ ತೆಗೆದ ಕೊಬ್ಬು, ಹಂದಿ ಮಾಂಸದ ಪದರದಿಂದ ತೆಗೆದ ಬಿಳಿ ಕೊಬ್ಬು ತುಪ್ಪದಲ್ಲಿ ಇರುವುದು ಕೂಡ ಬೆಳಕಿಗೆ ಬಂದಿದೆ.

ಇನ್ನು ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪವೇ ಹೋಗುತ್ತಿದೆ. ಆದರೆ ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ 4 ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿರಲಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ನಿನ್ನೆ ಕೆಎಂಎಫ್​ ಅಧ್ಯಕ್ಷ ಭೀಮಾನಾಯ್ಕ್​ ಹೇಳಿದ್ದಾರೆ.

ವಿಪರ್ಯಾಸವೆಂದರೆ ಶ್ರೀರಾಮ ಜನ್ಮಭೂಮಿಯಲ್ಲಿ ನಡೆದ ಅದ್ಧೂರಿ ರಾಮ ಮಂದಿರ ಉದ್ಘಾಟನೆ ವೇಳೆ ಇದೇ ತಿರುಪತಿ ಲಡ್ಡುವನ್ನು ಅತಿಥಿಗಳಿಗೆ ಪ್ರಸಾದವಾಗಿ ನೀಡಲಾಗಿತ್ತು.

ಇದನ್ನೂ ಓದಿ: Ration card : ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೇ? ಪರಿಶೀಲಿಸಿ..

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ