Natimani has revealed the story of sexual assault

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಲೈವ್ ನಲ್ಲಿ ಕಣ್ಣೀರಿಟ್ಟ ನಟಿ.. ಲೈಂಗಿಕ ದೌರ್ಜನ್ಯದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟ ನಟಿಮಣಿ (ವಿಡಿಯೋ ನೋಡಿ)

ಹೈದರಾಬಾದ್:‌‌ ಹೇಮಾ ಸಮಿತಿ ವರದಿ (Hema Committee Report) ಬಂದ ನಂತರ ಮಾಲಿವುಡ್‌(Molly wood) ಸಿನಿಮಾರಂಗದಲ್ಲಿ ಒಂದೊಂದೇ ಲೈಂಗಿಕ ಕಿರುಕುಳ ಪ್ರಕರಣ ಬೆಳಕಿಗೆ ಬರುತ್ತಿರುವುದು ಗಮನಾರ್ಹ ಸಂಗತಿ.

ಹೌದು, ಇದೀಗ ಆಂಧ್ರ ಪ್ರದೇಶದ ರಾಜಕಾರಣಿಯೊಬ್ಬರ ಮೇಲೆ ನಟಿಯೊಬ್ಬರು ಮಾಡಿರುವ ಲೈಂಗಿಕ, ಮಾನಸಿಕ ಹಿಂಸೆಯ ಆರೋಪ ಆಂದ್ರಪ್ರದೇಶದ ರಾಜಕೀಯ ಹಾಗೂ ಸಿನಿರಂಗದಲ್ಲೂ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಕಾದಂಬರಿ ಜೇತ್ವಾನಿ (Actress Kadambari Jetwani) ಬಣ್ಣದ ಲೋಕ್ಕೆ ಕಾಲಿಡುವ ಮುನ್ನ ಮುಂಬೈನಲ್ಲಿ ಮಾಡೆಲ್‌ ಆಗಿದ್ದರು. 2012ರಲ್ಲಿ ಬಂದ ʼಸಡ್ಡಾ ಅಡ್ಡಾʼ ಸಿನಿಮಾದಲ್ಲಿ ಕಾಣಿಸಿಕೊಂಡ ಬಳಿಕ 2015ರಲ್ಲಿ ಬಂದ ‘ಯೂಜಾ’ ಎನ್ನುವ ತೆಲುಗು ಚಿತ್ರಕ್ಕೆ ನಾಯಕಿಯಾಗಿಯೂ ಆಯ್ಕೆ ಆಗಿದ್ದರು.

ಹೀಗೆ, ಬಣ್ಣದ ಲೋಕದಲ್ಲಿ ತನ್ನ ಮೋಹಕ ಅಂದದಿಂದ ಗಮನ ಸೆಳೆದಿದ್ದ ಕಾದಂಬರಿ ಜೇತ್ವಾನಿ ತೆಲುಗಿನ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಇತ್ತೀಚೆಗೆ ಲೈವ್‌ನಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟರು.

ಅಲ್ಲದೆ, ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ(Jagan Mohan Reddy ) ಅವರ ವೈಎಸ್‌ಆರ್‌ಸಿಪಿ(YSCRP) ಪಕ್ಷದ ನಾಯಕನೊಬ್ಬನ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯದ ಆರೋಪ ಆಂಧ್ರದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ.

ವಿಜಯವಾಡದ ಜಿಪಂ ಮಾಜಿ ಅಧ್ಯಕ್ಷ ಕುಕ್ಕಲ ನಾಗೇಶ್ವರ ರಾವ್ ಅವರ ಮಗ ವೈಎಸ್‌ಆರ್‌ಸಿಪಿ ನಾಯಕ ಕುಕ್ಕಲ ವಿದ್ಯಾಸಾಗರ್‌ (Kukkala Vidya Sagar) ಎಂಬಾತ ಪ್ರತಿದಿನ ನನಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸುತ್ತಿದ್ದನು. ವಾಟ್ಸಾಪ್ ನಲ್ಲಿ ಕರೆ ಮಾಡಿ ಬೆತ್ತಲೆಯಾಗಿ ನಿಂತು ಸೆಲ್ಫಿ ರೂಪದಲ್ಲಿ ಕಾಣಿಸಿಕೊಳ್ಳುತ್ತಿದ್ದನು. ಅಂದಿನ ಆಂಧ್ರ ಸರ್ಕಾರದ ಪ್ರಬಲ ನಾಯಕರು, ಉನ್ನತ ಪೊಲೀಸ್ ಅಧಿಕಾರಿಗಳ ಗ್ಯಾಂಗ್ ಹಣ ಹಾಗೂ ಅಧಿಕಾರವನ್ನು ಬಳಸಿಕೊಂಡು ನನಗೆ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

ಆಂಧ್ರ ಸರ್ಕಾರದ ಆದೇಶದ ಮೇರೆಗೆ ಅದೊಂದು ದಿನ ಮುಂಬೈನಲ್ಲಿನ ನನ್ನ ಮನೆಗೆ ಆಂಧ್ರ ಪೊಲೀಸರು ದಾಳಿ ಮಾಡಿದ್ದರು. ನನ್ನನ್ನು ಅಪಹರಿಸಿ, ನನ್ನ ತಂದೆ – ತಾಯಿಯನ್ನು ಜೈಲಿಗಟ್ಟಿದ್ದರು. ಜೈಲಿನಲ್ಲಿ ನೀಡಿದ ಚಿತ್ರಹಿಂಸೆಯಿಂದಾಗಿ ನನ್ನ ತಂದೆಗೆ ಕಿವಿ ಕೇಳಿಸದಂತೆ ಆಯಿತು. ನನ್ನ ತಾಯಿಗೆ ಹೃದಯದ ಸಮಸ್ಯೆಯಾಯಿತು ಎಂದೂ ಆರೋಪಿಸಿದ್ದಾರೆ.

ಆರು ತಿಂಗಳಿಂದ ಯಾರೊಂದಿಗೂ ಮಾತನಾಡಲಿಲ್ಲ. ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಮುಂಬೈನಲ್ಲಿ ನನ್ನನ್ನು ಅಪಹರಿಸಿ ವಿಜಯವಾಡಕ್ಕೆ ಕರೆತರಲಾಯಿತು. ನನ್ನ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನನ್ನ ಪೋಷಕರ ಫೋನ್ ವಶಪಡಿಸಿಕೊಳ್ಳಲಾಗಿದೆ. ಅವರು ನನ್ನ ಸಂಬಂಧಿಕರಿಗೆ ಬೆದರಿಕೆ ಹಾಕಿದರು ಎಂದು ಅವರು ಹೇಳಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ನನ್ನ ಮೇಲೆ ದೂರು ದಾಖಲಿಸಿ ಸುಮಾರು 45 ದಿನಗಳ ಕಾಲ ನನ್ನನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ. ಈ ಕಾಲದಲ್ಲಿಯೂ ಮಹಿಳೆಗೆ ಈ ರೀತಿಯಾದರೆ ಮಹಿಳೆಯರಿಗೆ ಸ್ವಾತಂತ್ರ್ಯ ಎಲ್ಲಿದೆ ಎಂದು ಕಣ್ಣೀರಿಟ್ಟಿದ್ದಾರೆ.

ವಿದ್ಯಾ ಸಾಗರ್‌ ಪರಿಚಯವಾದದ್ದು ಹೇಗೆ?

ನನ್ನ ಮೇಲೆ ಸುಳ್ಳ ಆರೋಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ನನ್ನನ್ನು ಜೈಲಿಗಟ್ಟಿದ ಈತ ನನ್ನ ಸ್ನೇಹಿತವೆಂದು ಹೇಳಿಕೊಂಡು 2009ರಿಂದ ಪರಿಚಯವಾಗಿದ್ದ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಾ, ಒಳ್ಳೆಯದನ್ನು ಬಯಸುತ್ತಾ ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ. ಈತ ನನ್ನ ಜೀವನದಲ್ಲಿ ಹೇಗೆಲ್ಲಾ ಮಾಡುತ್ತಾನೆ ಅಂಥ ನಾನು ಕಲ್ಪನೆಯೂ ಮಾಡಿಕೊಂಡಿರಲಿಲ್ಲ. ಅವನ ಒಳ್ಳೆಯತನದ ಹಿಂದೆ ಒಂದು ಕೆಟ್ಟ ಉದ್ದೇಶವಿತ್ತು ಎಂದು ನಟಿ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಮುಖ್ಯಮಂತ್ರಿಯಾದ ಬಳಿಕ ನಾನು ಜೈಲಿನಿಂದ ಹೊರಬಂದಿದ್ದೇನೆ. ಅವರು ನಮ್ಮ ಜೀವನಕ್ಕೆ ದೇವರಂತೆ ಬಂದರು ಎಂದು ಅವರು ಚಂದ್ರಬಾಬು ನಾಯ್ಡು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸದ್ಯ ನಟಿಯ ಈ ಆರೋಪ ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಆರೋಪಿ ವಿದ್ಯಾ ಸಾಗರ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ