ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಔಷಧ ವ್ಯಾಪಾರಸ್ಥರು ಮೇ.20 ರಂದು ಔಷಧಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದು ಈ ಕುರಿತಂತೆ ವಿಜಯಪುರ ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದಿoದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಈಚೇಗೆ ಮನವಿ ಪತ್ರ ಸಲ್ಲಿಸಿರುವ ಸಂಘದ ಪದಾಧಿಕಾರಿಗಳು,ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಸರ್ಕಾರದ ನಿಷ್ಕಿçಯತೆಯನ್ನು ವಿರೋಧಿಸಿ ಮೇ.20 ರಂದು ಒಂದು ದಿನದ ರಾಷ್ಟ್ರವ್ಯಾಪಿ ಬಂದ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಪದೇ ಪದೇ ಜ್ಞಾಪಕ ಪತ್ರಗಳ ಮೂಲಕ ವಿನಂತಿಸಿದರೂ ಇ-ಪೋರ್ಟಲ್‌ಗಳ ಮೂಲಕ ವಹಿವಾಟು ನಡೆಸುವ ಔಷಧ ವ್ಯಾಪಾರವು ಬೀರುವ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ಇದು ದೇಶಾದ್ಯಂತ ಔಷಧ ವ್ಯಾಪಾರಿಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಮತ್ತು ಅರೆ-ನಗರಗಳ ಪ್ರದೇಶಗಳಲ್ಲಿನ ಸಣ್ಣ ಔಷಧ ವ್ಯಾಪಾರಿಗಳು ವಹಿವಾಟು ನಡೆಸುವುದು ಕಷ್ಟಕರವಾಗಿದ್ದು ಔಷಧಗಳು ಸರಿಯಾದ ಸಮಯಕ್ಕೆ ಸಿಗದೇ ಅಮೂಲ್ಯ ಪ್ರಾಣಗಳು ಹಾನಿಯಾಗುವ ಅಪಾಯನ್ನು ಸೃಷ್ಟಿಸುತ್ತಿದೆ. ತಾತ್ಕಾಲಿಕ ಕೋವಿಡ್-ಅವಧಿಯ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಬೇಕು. ಇ-ಫಾರ್ಮಾಸಿ ಸಂಬAಧಿತ ಅಧಿಸೂಚನೆ ಜಿ.ಎಸ್.ಆರ್ 817 (ಇ) ಅನ್ನು ಹಿಂಪಡೆಯಬೇಕು. ಕಾರ್ಪೋರೇಟ್‌ಗಳಿಂದ ಅನ್ಯಾಯದ ಆಳವಾದ ರಿಯಾಯಿತಿಯನ್ನು ನಿಲ್ಲಿಸಲು. “ಲೆವೆಲ್-ಪ್ಲೇಯಿಂಗ್ ಫೀಲ್ಡ್” ನೀತಿಯನ್ನು ಪರಿಚಯಿಸಬೇಕು ಎಂದು ವಿಜಯಪುರ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿAದ ಸಲ್ಲಿಸಲಾದ ಮನವಿಯಲ್ಲಿ ತಿಳಿಸಲಾಗಿದೆ.

ಸಂಘದ ಅಧ್ಯಕ್ಷ ಕೆ.ಆರ್.ಎತ್ತಿನಮನಿ, ಕಾರ್ಯದರ್ಶಿ ಸಂಗಮೇಶ ಗುಡ್ಡೋಡಗಿ,ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷ ಜಿ.ಎಂ.ಹಿರೇಮಠ್,ಉಪಾಧ್ಯಕ್ಷೆ ಕವಿತಾ ಪಾಟೀಲ್,ಕಾರ್ಯದರ್ಶಿ ಇಲಿಯಾಸ್ ಮಾಗಿ,ಜಿಲ್ಲಾ ಸಹ ಕಾರ್ಯದರ್ಶಿ ಶಿವು ಸಿದ್ದಾಪುರ,ರವೀಂದ್ರ ಐಹೊಳೆ ,ಮಲ್ಲಿಕಾರ್ಜುನ ಓತಗೇರಿ,ಮಂಜುನಾಥ್ ಹಿರೇಮಠ , ರೂಪಾ ಪತ್ತಾರ್, ದಿನೇಶ್ ಲೋಕರೆ,ಸಂಜಯ್ ಓಸ್ವಾಲ್, ಎಚ್.ಎ.ಪಾಟೀಲ್, ಕುಮಾರಸ್ವಾಮಿ ಶಿವಯೋಗಿಮಠ, ಗೌರಿಶಂಕರ್ ಹಿರೇಮಠ್, ಮಲ್ಲಿಕಾರ್ಜುನ್ ಕಲ್ಲುಂಡಿ, ಶಬೀರ್ ಮಿರ್ಜಾ, ಪಾಂಡು ಥೋರಾಥ್ ಮೊದಲಾದವರು ಮನವಿಗೆ ಸಹಿ ಮಾಡಿದ್ದಾರೆ

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು