New Ration Card: ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತ ಎಲ್ಲ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿಯನ್ನು ಪ್ರಾರಂಭಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ ಸಂಪೂರ್ಣ ವಿವರ ನೋಡಿ.
ರಾಜ್ಯದಲ್ಲಿ ಯಾವುದೇ ಯೋಜನೆಗಳು ಜಾರಿಯ ಬರಲಿ ಅವುಗಳ ಸದುಪಯೋಗ ಪಡೆದುಕೊಳ್ಳಲು ಈ ಒಂದು ರೇಷನ್ ಕಾರ್ಡ್ ಕಡ್ಡಾಯವಾಗಿ ಇರಲೇಬೇಕು. ಮನೆಗಳಿಗೆ ಉಚಿತವಾಗಿ ರೇಷನ್ ಪಡೆಯಲು ಸಹ ಈ ಒಂದು ಚೀಟಿ ಬೇಕು.
ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹೊಸ ರೀತಿ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗಿದೆ. ಈ ಒಂದು ಅವಕಾಶವನ್ನು ಫಲಾನುಭವಿಗಳು ಸದುಪಯೋಗ ಪಡೆದುಕೊಳ್ಳಬೇಕಾಗಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಸುವ ಸಂಪೂರ್ಣ ಹಂತ ಮತ್ತು ವಿವರಣೆಗಳು, ದಾಖಲೆಗಳನ್ನು ಈ ಕೆಳಗಡೆ ನೀಡಲಾಗಿದೆ ಓದಿ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅಭ್ಯರ್ಥಿ ಕರ್ನಾಟಕದ ನಿವಾಸಿ ಆಗಿರಬೇಕು.
ಕುಟುಂಬದಲ್ಲಿ ರೇಷನ್ ಕಾರ್ಡ್ ಇಲ್ಲದೆ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಹೊಸದಾಗಿ ಮದುವೆಯಾದ ಗಂಡ ಹೆಂಡತಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆಧಾರ್ ಕಾರ್ಡ್
ಮೊಬೈಲ್ ಸಂಖ್ಯೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮತದಾನದ ಗುರುತಿನ ಚೀಟಿ
ಫೋಟೋ
ಡ್ರೈವಿಂಗ್ ಲೈಸೆನ್ಸ್
ಅರ್ಜಿದಾರರ ವಿಳಾಸ ಪುರಾವೆ
ಅರ್ಜಿ ಸಲ್ಲಿಸುವುದು ಹೇಗೆ
ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾದು ಕುಳಿತಿದ್ದರೆ ಮೇಲೆ ನೀಡಿರುವ ದಾಖಲೆಗಳು ಹಾಗೂ ಅರ್ಹತೆಗಳೊಂದಿಗೆ ನೀವು ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರ ಅಥವಾ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದಾಗಿದೆ.