ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಈ ಬಂಡೆ ಇರೋವರ್ಗೂ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

ಮೈಸೂರು: ತನ್ನ ಪುತ್ರ ನಿಖಿಲ್ ಕುಮಾರಸ್ವಾಮಿಯ ರಾಜಕೀಯ ಭವಿಷ್ಯಕ್ಕಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣನ ಮೇಲೆ ಕೇಸ್ ಆಗುವಂತೆ ಮಾಡಿದ್ದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

Join Our Telegram: https://t.me/dcgkannada

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರ ಮೈಸೂರು ಚಲೋ ಪಾದಯಾತ್ರೆ ವಿರುದ್ಧ ಟಕ್ಕರ್ ಕೊಡಲು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡ ಜನಾಂದೋಲನಾ ಸಮಾವೇಶದಲ್ಲಿ ಅವರು ಮಾತನಾಡಿದರು.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್ ವಿಚಾರದಲ್ಲಿ ಬಿಜೆಪಿಯ ಮಾಜಿ ಶಾಸಕ ಪ್ರೀತಂಗೌಡ ಹಾಗೂ ನನ್ನ ಕೈವಾಡವಿದೆ ಅಂತಾ ಕುಮಾರಸ್ವಾಮಿ ಹೇಳ್ತಾರೆ. ಅವರ ಪಾದಯಾತ್ರೆಯಲ್ಲಿ ಪ್ರೀತಂಗೌಡ ವಿರುದ್ಧ ಜೆಡಿಎಸ್ ಬೆಂಬಲಿಗರು ಕಿರಿಕ್ ಮಾಡ್ತಾರೆ. ನನ್ನ ವಿರುದ್ಧ ಪೆನ್‌ಡ್ರೈವ್ ವಿಚಾರ ಯಾಕೆ ಮಾಡ್ತೀರಿ ಕುಮಾರಣ್ಣ ಎಂದು ಪ್ರಶ್ನಿಸಿದರು. ತನ್ನ ಮಗನಿಗೆ ತೊಂದರೆ ಆಗದಿರಲಿ ಅಂತಾ ಇನ್ನೊಬ್ಬರ ಮಗನ ಮೇಲೆ ನೀವು ಮಾಡಿರುವ ಷಡ್ಯಂತ್ರ ಎಂದು ಡಿಕೆ ಶಿವಕುಮಾರ್ ( DK Shivakumar in Janandolana) ಅವರು ಗಂಭೀರ ಆರೋಪ ಮಾಡಿದರು.

ಕುಮಾರಸ್ವಾಮಿ ಅವರು ತಮ್ಮ ಕುಟುಂಬಕ್ಕೆ ತೊಂದರೆ ಆದರೆ ಯಾರನ್ನು ಬಿಡಲ್ಲ. ಇನ್ನು ನನ್ನ ಹಾಗೂ ಸಿಎಂ ಅವರನ್ನು ಬಿಡಲು ಸಾಧ್ಯವೇ ಎಂದು ವ್ಯಂಗ್ಯವಾಡಿದರು. ಓರ್ವ ಹಿಂದುಳಿದ ನಾಯಕ ಸಿಎಂ ಆಗಿದ್ದು ಅವರಿಗೆ ಸಹಿಸಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ. ಈ ಬಂಡೆ ಜೊತೆ 136 ಜನ ಶಾಸಕರಿದ್ದಾರೆ. ನಮಗೆ ಮತ ನೀಡಿದ 1 ಕೋಟಿ 80 ಲಕ್ಷ ಮತದಾರರು ಸಿದ್ದರಾಮಯ್ಯನವರ ಜೊತೆಗಿದ್ದಾರೆ. ಇದನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಸಂದೇಶ ರವಾನಿಸಿದರು.

ಇದನ್ನೂ ಓದಿ: ಇವರ ಷಡ್ಯಂತ್ರಕ್ಕೆ ಬಲಿಯಾಗಲ್ಲ; ಇದನ್ನೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ಸಂದೇಶ

ಅಂದು ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ವಿ. ಗಣಿಧಣಿಗಳ ವಿರುದ್ಧ ಪಾದಯಾತ್ರೆ ಮಾಡಿದ್ವಿ. ಕ್ವಿಟ್ ಇಂಡಿಯಾ ಮೂಮೆಂಟ್ ದಿನ ಬಳ್ಳಾರಿಯಲ್ಲಿ ಸಮಾವೇಶ ಮಾಡಿದ್ವಿ. ಇಂದು ಜೆಡಿಎಸ್-ಬಿಜೆಪಿ ವಿರುದ್ಧ ಸಂವಿಧಾನ ಉಳಿಸಲು ಹೋರಾಟ. ಬಡವರ ಪರವಾದ ಸರ್ಕಾರ ಉಳಿಸಲು, ಅನ್ಯಾಯದ ವಿರುದ್ಧ ಹೋರಾಟ ಮಾಡ್ತಿದ್ದೇವೆ. ಬಿಜೆಪಿ – ಜೆಡಿಎಸ್​ ಮಾಡ್ತಿರೋದು ಪಾಪ ವಿಮೋಚನಾ ಯಾತ್ರೆ ಎಂದು ಕಿಡಿಕಾರಿದರು.

ಸಿದ್ದರಾಮಯ್ಯನವರ ನಾಯಕತ್ವ, ನನ್ನ ಅಧ್ಯಕ್ಷತೆಯಲ್ಲಿ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ತೆಗೆಯಲು ಹುನ್ನಾರ ನಡೆಯುತ್ತಿದೆ. ಬಡವರಿಗೆ ಗ್ಯಾರಂಟಿ ಕೊಟ್ಟು, ಬಡವರ ರಕ್ಷಣೆಗಾಗಿ ನಾವು ಹೋರಾಟ ಮಾಡ್ತಿದ್ದೇವೆ. ಮಿಸ್ಟರ್ ಕುಮಾರಸ್ವಾಮಿ, ಅಶೋಕ್​, ವಿಜಯೇಂದ್ರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದರು. ಕುಮಾರಸ್ವಾಮಿ ನೀನು ಗೆದ್ದಿರೋದು 19 ಸೀಟು ಅಷ್ಟೇ. ನಿನಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ?. ಹೇ ಅಶೋಕಾ, ವಿಜಯೇಂದ್ರ ನಿಮಗೆ ಸಿದ್ದರಾಮಯ್ಯ ರಾಜೀನಾಮೆ ಬೇಕಾ ಎಂದು ಡಿಕೆಶಿ ( DK Shivakumar in Janandolana) ಪ್ರಶ್ನಿಸಿದರು.

10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರ ಮುಟ್ಟಲಾಗದು: 2023ರಲ್ಲಿ ರಾಜ್ಯದ ಜನರು ನಮಗೆ ಶೇ. 43ರಷ್ಟು ಮತ ನೀಡಿದ್ದಾರೆ, ಲೋಕಸಭೆಯಲ್ಲಿ ಶೇ.45ರಷ್ಟು ಮತ ನೀಡಿದ್ದಾರೆ. 1 ಸೀಟು ಹೊಂದಿದ್ದ ನಾವು 9 ಸೀಟು ಗೆದ್ದಿದ್ದೇವೆ. ಜನರ ತೀರ್ಪನ್ನು ನಾವು ಒಪ್ಪುತ್ತೇವೆ. ಈ ಸರ್ಕಾರವನ್ನು ಮುಂದಿನ 10 ತಿಂಗಳಲ್ಲಿ ಅಲ್ಲಾಡಿಸಬಹುದು ಎಂಬುದು ನಿಮ್ಮ ಭ್ರಮೆ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮುಂದಿನ 10 ತಿಂಗಳಲ್ಲ, ಮುಂದಿನ 10 ವರ್ಷ ಈ ಸರ್ಕಾರವನ್ನು ಮುಟ್ಟಲು ಸಾಧ್ಯವಿಲ್ಲ. ಮುಡಾ ಹಗರಣ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಸಿಎಂ ರಾಜೀನಾಮೆ ಕೇಳುತ್ತಿರುವುದು ಅನೈತಿಕ ಎಂದು ಹೇಳಿದರು.

ಮುಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ?. ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಸಲ್ಲಿಸಿದ್ದರು ಎಂದರು.

ನಾನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮುಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ? ಆದೇಶ ಮಾಡಿದ್ದಾರಾ? ಅಧಿಕಾರ ದುರುಪಯೋಗ ಮಾಡಿದ್ದಾರಾ? ಇಲ್ಲ. ಆದರೂ ಇದನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಏಕೆ ಅಕ್ರಮ ಎಂದು ಕರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ