ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ.
Join Our Telegram: https://t.me/dcgkannada
ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಹಣ ಕಾಸು (ಲೆಕ್ಕಪತ್ರ ಮತ್ತು ಬಜೆಟ್) ವಿಚಾರಗಳಲ್ಲಿ PDO ಮತ್ತು ಅಧ್ಯಕ್ಷರ ಜಂಟಿ ಸಹಿ ವ್ಯವಸ್ಥೆ ಇದೆ. ಇವರಿಬ್ಬರ ಸಹಿ ಮಾಡಿದ ನಂತರವೇ ಕಾಮಗಾರಿಗಳಿಗೆ ಹಣಮಂಜೂರು ಮಾಡಲಾಗುತ್ತದೆ. ಕೆಲವು ಬಾರಿ ಹಣಕಾಸು ವ್ಯವಹಾರ ದಲ್ಲಿ ಲೋಪವಿದ್ದರೂ ಅನುದಾನ ಬಿಡುಗಡೆಗೆ ಅಧ್ಯಕ್ಷರು ಸಹಿ ಮಾಡುತ್ತಾರೆ. ಆಗ ಪಿಡಿಒ ಏನೂ ಮಾಡಲಾಗದೆ ಮಂಜೂರಾತಿಗೆ ಒಪ್ಪಿಗೆ ಸೂಚಿಸುತ್ತಾರೆ. ಆದರೆ, ಲೆಕ್ಕಪರಿಶೋಧನೆ ವೇಳೆ ಅಕ್ರಮ ಬಯಲಾದಾಗ ಪಿಡಿಒಗಳು ಮಾತ್ರ ಇಲಾಖಾ ವಿಚಾರಣೆ ಎದುರಿಸಬೇಕಾಗುತ್ತದೆ.
ಗ್ರಾಪಂ ಭ್ರಷ್ಟಾಚಾರಕ್ಕೆ ಅಧ್ಯಕ್ಷರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಇದರಿಂದ ಬೆಸತ್ತಿರುವ ಕರ್ನಾಟಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘ, ಸಹಿ ಅಧಿಕಾರ ಇರುವ ಜನಪ್ರತಿನಿಧಿಗಳನ್ನೂ ಭ್ರಷ್ಟಾಚಾರದಲ್ಲಿ ತಪ್ಪಿತಸ್ತರು ಎಂದು ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ಸಂದಿಸಿದ ಸರ್ಕಾರ ಚುನಾಯಿತ ಪ್ರತಿನಿಧಿಗಳಿಗೆ ಮೂಗುದಾರ ಹಾಕಲು ನಿಯಮ ರೂಪಿಸುತ್ತಿದೆ.
ಇದನ್ನೂ ಓದಿ: Mudhol: ಬೇಡರ ಊರಲ್ಲಿ ಮಧ್ಯರಾತ್ರಿ ಧ್ವಜಾರೋಹಣ
ಈ ಕುರಿತು ಜು.30ರಂದು ಕರ್ನಾಟಕ ಪಂಚಾಯತ್‌ರಾಜ್ ಆಯುಕ್ತಾಲಯದ ಎಲ್ಲಾ ಸಿಇಒಗಳಿಗೆ ಸುತ್ತೋಲೆ ಹೊರಡಿಸಿದ್ದು, ಪಿಡಿಒ, ಅಧ್ಯಕ್ಷರು, ಸದಸ್ಯರು ಹಾಗೂ ಎಂಜಿನಿಯರ್ ಮೇಲೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅಭಿಪ್ರಾಯ ಕೋರಿದೆ. ನಂತರ ಸರ್ಕಾರ ಅಂತಿಮವಾಗಿ ನಿರ್ಧರಿಸಲಿದೆ.
756 ಪಿಡಿಒ ವಿರುದ್ಧ ಕೇಸ್: ರಾಜ್ಯದಲ್ಲಿರುವ 5,963 ಗ್ರಾಪಂಗಳಲ್ಲಿ 91,437 ಮಂದಿ ಚುನಾಯಿತ ಪ್ರತಿನಿಧಿಗಳಿದ್ದಾರೆ. 5,226 ಪಿಡಿಒಗಳಿದ್ದು, ಈ ಪೈಕಿ ಕಳೆದ 2 ವರ್ಷಗಳಲ್ಲಿ 756 ಪಿಡಿಒಗಳು ಹಗರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇವರಲ್ಲಿ 125 ಮಂದಿ ಅನಾರೋಗ್ಯ ಹಾಗೂ ಆತ್ಮಹತ್ಯೆಗೆ ಬಲಿಯಾಗಿದ್ದಾರೆ.