ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಹೆಸರು ನೋಂದಾಯಿಸಲು ಸೂಚನೆ:ಮಾ.21 ರಂದು ಉಚಿತ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಈಗಾಗಲೇ ತಾಲ್ಲೂಕಿನಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಕಡು ಬಡವರ ಮಕ್ಕಳಿಗೆ ಕೋವಿಡ್ ಕಾಲಘಟ್ಟದಲ್ಲಿ ಎರಡು ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ಶಿಕ್ಷಣವನ್ನು ಉಚಿತವಾಗಿ ನೀಡಿ ಜನಮನ್ನಣೆ ಗಳಿಸಿರುವ ಸಮಾಜ ಸೇವಕ ಎಂ.ಎನ್.ಮದರಿ ಅವರು ಖಿಲಾರಹಟ್ಟಿ ಗ್ರಾಮದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಶ್ರೀ ಬೀರಲಿಂಗೇಶ್ವರ ಹಾಗೂ ಕಾಡಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.

ಮಾ.21 ರಂದು ಖಿಲಾರಹಟ್ಟಿಯಲ್ಲಿ ಮದರಿ ಅವರ ನೇತೃತ್ವದಲ್ಲಿ ಜರುಗಲಿರುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಲಿಚ್ಛಿಸುವ ವಧು ವರರು ಮಾ.16, 2026ರೊಳಗಡೆ ಹೆಸರುಗಳನ್ನು ನೋಂದಾಯಿಸುವಂತೆ ನೇತೃತ್ವ ವಹಿಸಿರುವ ಮುಖಂಡ ಎಂ.ಎನ್. ಮದರಿ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಮರುಮದುವೆ, ಬಾಲ್ಯವಿವಾಹಗಳಿಗೆ ಆಸ್ಪದ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಹೆಸರು ನೋಂದಾಯಿಸಲು ಮೊ.ನಂ.; 9980394710, 9980529772, 9972296782, 9972392774 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ