ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಡಿ.೧೫ ರಂದು ಕಾನಿಪ ಧ್ವನಿ ಸಂಘದಿoದ ಬೆಳಗಾವಿ ಚಲೋ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನಿಯಮ ಸರಳೀಕರಣಕ್ಕೆ ಆಗ್ರಹಿಸಿ ಹೋರಾಟ

ಮುದ್ದೇಬಿಹಾಳ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ನೀಡಲು ಸರ್ಕಾರ ಹೊರಡಿಸಿರುವ ಆದೇಶದಲ್ಲಿನ ಕಠಿಣ ಮಾನದಂಡಗಳನ್ನು ಸರಳೀಕರಣಗೊಳಿಸಬೇಕು. ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಪ್ರಮುಖ ೧೨ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಡಿ.೧೫ ರಂದು ಬೆಳಗಾವಿಯ ವಿಧಾನಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ,ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ೧೬ ಸಾವಿರ ಪತ್ರಕರ್ತರಿಗೆ ಸರ್ಕಾರ ಉಚಿತವಾಗಿ ಸಂಚರಿಸುವುದಕ್ಕೆ ಬಸ್ ಪಾಸ್ ನೀಡಲು ನಡೆಸಿದ ಹೋರಾಟದ ಫಲವಾಗಿ ವಾರ್ತಾ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಿದ್ದು ತಾಲ್ಲೂಕು ಮಟ್ಟದ ಯಾವೊಬ್ಬ ಪತ್ರಕರ್ತರಿಗೂ ಬಸ್ ಪಾಸ್ ದೊರೆಯುವುದು ಗಗನ ಕುಸುಮವಾಗಿದೆ.ಈ ನಿಟ್ಟಿನಲ್ಲಿ ಬಸ್ ಪಾಸ್‌ಗೆ ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪಿಆರ್.ಜಿ.ಐ ಹಾಗೂ ಆರ್.ಎನ್.ಐ. ಹೊಂದಿರುವ ಪತ್ರಕರ್ತರಿಗೆ ವಿಕಾಸ ಸೌಧ,ವಿಧಾನಸೌಧಕ್ಕೆ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು, ಜಿಲ್ಲಾ ವ್ಯಾಪ್ತಿಯಲ್ಲಿರುವ ಪತ್ರಿಕಾ ಭವನಗಳನ್ನು ಯಾವೊಂದು ಪತ್ರಿಕಾ ಸಂಘಟನೆಗಳಿಗೆ ನೀಡದೇ ಆಯಾ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳ ಮೂಲಕ ನಿರ್ವಹಣೆಗೆ ಆದೇಶಿಸಬೇಕು.ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ ೩೦೦ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು.ಪತ್ರಕರ್ತರಿಗೆ ಜೀವ ವಿಮೆ ಸೌಲಭ್ಯ ಸರ್ಕಾರ ಒದಗಿಸಬೇಕು.ಕೆಲವು ಪೊಲೀಸರಿಂದ ಪತ್ರಕರ್ತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು.ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.ಪತ್ರಕರ್ತರು ಕರ್ತವ್ಯದ ಸಮಯದಲ್ಲಿ ಅಪಘಾತ,ಸಹಜವಾಗಿ ಮೃತಪಟ್ಟರೆ ಅವರ ಅವಲಂಬಿತರಿಗೆ ೧೦ ಲಕ್ಷ ರೂ.ಪರಿಹಾರ ನೀಡಬೇಕು.ವಾರ,ಪಾಕ್ಷಿಕ,ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಶಾಸನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆAದು ವಾರ್ತಾ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ನಿಬಂಧನೆ ಕೈ ಬಿಡಬೇಕು.ಪತ್ರಕರ್ತರಿಗೆ ಉಚಿತ ಟೋಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದ್ದು ರಾಜ್ಯದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ