One police constable is enough to arrest Kumaraswamy.. CM hits back at HDK

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಕುಮಾರಸ್ವಾಮಿ ಬಂಧನಕ್ಕೆ ಒಬ್ಬ ಪೊಲೀಸ್ ಕಾನ್ಸಟಬಲ್ ಸಾಕು.. HDKಗೆ ಸಿಎಂ ತಿರುಗೇಟು

ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದರು.

ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

Join Our Telegram: https://t.me/dcgkannada

ನೂರು ಸಿದ್ದರಾಮಯ್ಯ ಬಂದರೂ ನನ್ನ‌ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ‌, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ತಿರುಗೇಟು ನೀಡಿದರು.

ಯಾರನ್ನಾದರೂ ಬಂಧಿಸುವುದು ಪೊಲೀಸ್ ಇಲಾಖೆಯವರೇ ಹೊರತು ನಾನಲ್ಲ. ಕುಮಾರಸ್ವಾಮಿ ಅವರು ಹೆದರಿರುವ ಕಾರಣಕ್ಕಾಗಿ ಇಂದು ಪತ್ರಿಕಾಗೋಷ್ಠಿಯನ್ನು ಮಾಡಿದ್ದಾರೆ. ಪ್ರಕರಣದ ಸಮಗ್ರ ತನಿಖೆಗೆ ಆಯೋಗವನ್ನು ರಚಿಸಲಾಗಿದ್ದು, ಸತ್ಯ ಹೊರಬೀಳುತ್ತದೆ. ಕುಮಾರಸ್ವಾಮಿ ಹೇಳುವುದು ಸತ್ಯವೇ ಎಂಬುವುದು ತನಿಖೆಯಿಂದ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನು ಓದಿ: ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HD Kumaraswamy

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಯಾವುದೇ ವಿಚಾರಣೆ ನಡೆದಿಲ್ಲ, ವರದಿಯಾಗಲಿ, ಪತ್ರವಾಗಲಿ ಅಥವಾ ಆದೇಶವಾಗಲಿ ಇಲ್ಲ. ಆ ಅವಧಿಯಲ್ಲಿ ಪ್ರಭಾವ ಬೀರಲು ನಾನು ಸಿಎಂ ಅಥವಾ ಮಂತ್ರಿಯಾಗಿರಲಿಲ್ಲ. ಕುಮಾರಸ್ವಾಮಿಯವರು ಯಾವತ್ತಿದ್ದರೂ ಹಿಟ್ ಅಂಡ್ ರನ್ ಮಾಡುವವರು, ವಿಧಾನಸಭಾ ಅಧಿವೇಶನ ಸಂದರ್ಭ ದಲ್ಲಿ ತನ್ನ ಬಳಿ ‘ಪೆನ್ ಡ್ರೈವ್’ ಇದೆ ಎಂದರು.

ಆದರೆ, ಅವರು ಇದುವರೆಗೆ ಮಾಡಿರುವ ಯಾವುದೇ ಆರೋಪಗಳಿಗೆ ತಾರ್ಕಿಕ ಅಂತ್ಯ ಕಂಡಿಲ್ಲ. ತನ್ನ ಬಳಿ ದಾಖಲೆಗಳಿವೆ ಎನ್ನುವ ಕುಮಾರಸ್ವಾಮಿಯವರು, ಅವುಗಳನ್ನು ಬಿಡುಗಡೆ ಮಾಡಬೇಕು.
ಸಿದ್ದರಾಮಯ್ಯನವರು ದಾಖಲಾತಿಗಳನ್ನು ತಿದ್ದಿದ್ದಾರೆ ಎಂದು ಕುಮಾರಸ್ವಾಮಿಯವರು ಆರೋಪಿಸಿರುವ ಬಗ್ಗೆ ಉತ್ತರಿಸಿ, ನಾನು ಯಾವುದೇ ದಾಖಲಾತಿಗಳನ್ನು ತಿದ್ದಿಲ್ಲ. 2014 ರ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿಲ್ಲ. 2021 ರಲ್ಲಿ ಸಲ್ಲಿಸಿದ ಪತ್ರದ ಮೇಲೆ ನಿವೇಶನ ಹಂಚಿಕೆಯಾಗಿದೆ. ಅಂದು ಮುಡಾ ಮಂಡಳಿ ಅಧ್ಯಕ್ಷರಾಗಿದ್ದವರು ಬಿಜೆಪಿಯವರು. ಆಗ ಮಂಡಳಿಯಲ್ಲಿದ್ದವರು ಬಿಜೆಪಿ ಹಾಗೂ ಜೆಡಿಎಸ್ ನವರು , ಆಗ ಆದ ನಿವೇಶನ ಹಂಚಿಕೆಗೆ ಯಾರು ಜವಾಬ್ದಾರರು. ಈ ಬಗ್ಗೆ ಆಯೋಗವನ್ನು ರಚಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ