Outrage over expulsion of Yatna: Ready to give his life for Yatna - Desai

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯಲ್ಲಿ ಅವರು ಮಾತನಾಡಿದರು.

ಯಾವ ಸಮಾಜ ನಿಮಗೆ ಸಪೋರ್ಟ ಮಾಡಿದ್ದರೋ ಅವರ ದ್ರಾಕ್ಷಿ ತೋಟ ಬಂದ ಮಾಡಿ ಸಂಸ್ಕಾರ ಇಲ್ಲದವರಂತೆ ನಡೆದುಕೊಂಡವರು ನೀವು. ಬಸನಗೌಡರ ಬಗ್ಗೆ ಹಗುರವಾಗಿ ಮಾತನಾಡಿದರೆ ನಾವು ಸುಮ್ಮನೆ ಕೂರುವುದಿಲ್ಲ. ದೇಶಮುಖರು, ನಾಡಗೌಡರು ಇಷ್ಟು ವರ್ಷ ಎಂಎಲ್‌ಎ ಆದರೂ ಮಿಣಜಗಿ ಕಲ್ಲಿನ ಕ್ವಾರಿ ಬಂದ್ ಆಗಿರಲಿಲ್ಲ. ಆದರೆ ಹಿಂದಿನ ಶಾಸಕರು ಅಧಿಕಾರದಲ್ಲಿದ್ದಾಗ ಕ್ವಾರಿ ಬಂದ್ ಮಾಡಿಸಿದರು. ಬಸನಗೌಡರ ಬಗ್ಗೆ ನೀವು ಮಾತನಾಡಿದರೆ ನಾವು ಅದೇ ಧಾಟಿಯಲ್ಲಿ ನಿನಗೆ ಉತ್ತರ ಕೊಡುತ್ತೇವೆ. ಯತ್ನಾಳ ಅವರು ನಮಗೆ ತಾಯಿ ಇದ್ದಂತೆ ಅವರಿಗೆ ಅಪಮಾನವಾದರೆ ನಾವು ಸಹಿಸುವುದಿಲ್ಲ ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಯುವ ಬ್ರಿಗೇಡ್ ಸಂಚಾಲಕ ರಾಘವ ಅಣ್ಣಿಗೇರಿ ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದರೆ ಯತ್ನಾಳ ಪಕ್ಷದಲ್ಲಿರಬೇಕು. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ ಎಂದು ಭಾಷಣ ಮಾಡುವ ಬಿಜೆಪಿ ವರಿಷ್ಠರು ಅಪ್ಪ ಮಕ್ಕಳ ಮಾತು ಕೇಳಿ ಯತ್ನಾಳರನ್ನು ಪಕ್ಷದಿಂದ ಹೊರಗಡೆ ಹಾಕಿದ್ದೀರಿ. ಬ್ರಷ್ಟಾಚಾರಿ, ಅಡ್ಜಸ್ಟ್ಮೆಂಟ್ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಯತ್ನಾಳರ ಪರ ಹೋರಾಟಕ್ಕೆ ಅಭಿಮಾನಿಗಳು ಸ್ವಯಂಪ್ರೇರಿತಾಗಿ ಬಂದಿದ್ದಾರೆ. ನಿಮ್ಮ ಹಾಗೆ ಜನರನ್ನು ಕೂಡಿಸಲು ಹಣ, ಸೀರೆ ಕೊಟ್ಟು ಕರೆತರುವುದಿಲ್ಲ. ಕೀಳುಮಟ್ಟದ ವಿಷಯಗಳನ್ನು ಹೇಳುವುದನ್ನು ಕೈಬಿಡಿ ಎಂದರು.

ಮುಖಂಡರಾದ ಬಸನಗೌಡ ಪಾಟೀಲ (ನಾಗರಾಳ ಹುಲಿ), ಎಂ. ಎಸ್. ರುದ್ರಗೌಡರ, ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಿತ್ತೂರು ಚೆನ್ನಮ್ಮ ಯುವ ಘಟಕದ ತಾಲ್ಲೂಕು ಅಧ್ಯಕ್ಷ ರವಿ ಕಮತ, ಬಸರಕೋಡದ ಸೂಳಿಭಾವಿ, ಬಸವರಾಜ ಗೋನಾಳ, ಕಾಮರಾಜ ಬಿರಾದಾರ ಮೊದಲಾದವರು ಇದ್ದರು.

ಮುದ್ದೇಬಿಹಾಳ ಪಟ್ಟಣದ ಬನಶಂಕರಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ಬಸವೇಶ್ವರ ವೃತ್ತ, ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಕಿತ್ತೂರು ಚೆನ್ನಮ್ಮನವರ ವೃತ್ತದಲ್ಲಿ ಸಮಾಪ್ತಿಗೊಳಿಸಲಾಯಿತು.

ಹೋರಾಟದಲ್ಲಿ ತಾಲ್ಲೂಕು ಪಂಚಮಸಾಲಿ ಸಮಾಜ, ಯತ್ನಾಳರ ಅಭಿಮಾನಿಗಳು, ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಸಮಾಪ್ತಿ ಗೊಳಿಸಲಾಯಿತು. ವಿರೋಧದ ಮಧ್ಯೆಯೂ ಯಡಿಯೂರಪ್ಪ, ವಿಜಯೇಂದ್ರ, ನಡಹಳ್ಳಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಗಂಟೆ ರಸ್ತೆ ತಡೆ : ಬಸವೇಶ್ವರ ವೃತ್ತಕ್ಕೆ ಆಗಮಿಸಿದಾಗ ಹೋರಾಟಗಾರರು ನಾಲ್ಕು ದಿಕ್ಕಿನಿಂದ ರಸ್ತೆಗಳನ್ನು ಬಂದ್ ಮಾಡಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯುಂಟಾಯಿತು. ಸಿಪಿಐ ಸಿಪಿಒಐ ಮೊಹ್ಮದ ಫಸಿವುದೀನ, ಪಿಎಸ್‌ಐ ಸಂಜಯ ತಿಪರಡ್ಡಿ ಬಿಗಿ ಭದ್ರತೆ ಒದಗಿಸಿದ್ದರು.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ