ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ-2026 ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಸ್ಕಾಲರ್‌ಶಿಪ್ ಪರೀಕ್ಷೆಯು ಮೂರು ಕೋಟಿ ರೂ.ವೆಚ್ಚದ್ದಾಗಿದ್ದು ಪ್ರಸಕ್ತ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ.

ಸ್ಕಾಲರ್‌ಶಿಪ್ ವಿವರ : ಪರೀಕ್ಷೆಯಲ್ಲಿ ಪ್ರಥಮ 1-20ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 3.80 ಲಕ್ಷ ರೂ.ವೆಚ್ಚದಲ್ಲಿ ಸಂಪೂರ್ಣ ಎರಡು ವರ್ಷದ ವಸತಿ,ಊಟ ಸಮೇತ ಉಚಿತ ಶಿಕ್ಷಣ ಕಲ್ಪಿಸಲಾಗುತ್ತದೆ. 21-40ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 1.90 ಲಕ್ಷ ರೂ.ವೆಚ್ಚದಲ್ಲಿ ಸಂಪೂರ್ಣ ಎರಡು ವರ್ಷದ ಉಚಿತ ಶಿಕ್ಷಣ, 40-60ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ 95 ಸಾವಿರ ರೂ.ವೆಚ್ಚದಲ್ಲಿ ಶೇ.50ರಷ್ಟು ಎರಡು ವರ್ಷದ ಶಿಕ್ಷಣದ ಶುಲ್ಕದ ರಿಯಾಯಿತಿ.,61-80ನೇ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗಳಿಗೆ ಎರಡು ವರ್ಷದ ಶಿಕ್ಷಣದಲ್ಲಿ ಶೇ.15ರಷ್ಟು ರಿಯಾಯಿತಿ ನೀಡಲಾಗುವುದು.

ಪರೀಕ್ಷೆಯು ಏ.4 ರಂದು ಮದ್ಯಾಹ್ನ 12ಕ್ಕೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ನಡೆಯಲಿದೆ.ಪರೀಕ್ಷೆಯಲ್ಲಿ ಭಾಗವಹಿಸುವರು ತಮ್ಮ ಹೆಸರು-ತರಗತಿ-ಶಾಲೆ ಹೆಸರು-ವಿಳಾಸ-ಮೊಬೈಲ್ ಸಂಖ್ಯೆ ಟೈಪ್ ಮಾಡಿ ಮೊ.9680095756 ಸಂಖ್ಯೆಗೆ ಕಳಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ಮೊ.7483147040,8310035858,9019460665 ಸಂಪರ್ಕಿಸಬಹುದಾಗಿದೆ.

ಪ್ರಶಸ್ತಿ,ಸನ್ಮಾನ ಸಮಾರಂಭ :
ಆಕ್ಸಫರ್ಡ್ ಜೀನಿಯಸ್ ಪ್ರಶಸ್ತಿ ಪ್ರದಾನ ಹಾಗೂ ಮೆಡಿಕಲ್ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏ.4 ರಂದು ಮದ್ಯಾಹ್ನ 2.30ಕ್ಕೆ ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಲಾಗಿದೆ.

ಮುದನೂರ ಕಂಠಿಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ದಿವ್ಯ ಸಾನಿಧ್ಯ ವಹಿಸಲಿದ್ದು ಅಕ್ಕಮಹಾದೇವಿ ಮಹಿಳಾ ವಿವಿ ಕಾಲೇಜಿನ ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಕರಾಗಿ ಆಗಮಿಸುವರು.ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ ವಹಿಸುವರು.ಮುಖ್ಯ ಅತಿಥಿಗಳಾಗಿ ಇಲಕಲ್ ವಿಜಯಮಹಾಂತೇಶ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ವಿ.ಬಿರಾದಾರ,ಬೆಂಗಳೂರಿನ ಎಂ.ವಿ.ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಬಸವರಾಜ ಅಸ್ಕಿ, ದೇವಿಕಾ ಸುಬ್ಬರಾವ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ ,ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಆಗಮಿಸುವರು.ಹೈದರಬಾದ್‌ನ ತರಬೇತಿದಾರ ಗಿರಿಧರ ಪೂಜಾರ,ಸಂಗಮೇಶ ಹೂಗಾರ ವಿಶೇಷ ಆಮಂತ್ರಿತರಾಗಿ ಆಗಮಿಸುವರು ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಅಮಿತಗೌಡ ಎಂ.ಪಾಟೀಲ, ದರ್ಶನಗೌಡ ಎಂ. ಪಾಟೀಲ, ಮುಖ್ಯವ್ಯವಸ್ಥಾಪಕ ವಿಜಯಕುಮಾರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,