ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತರು ವಕ್ಭ್ ಬೋರ್ಡ್ ವಿರುದ್ಧ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಎರಡನೇ ದಿನದ ಹೋರಾಟದಲ್ಲಿ ಅವರು ಬೆಂಬಲ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಎರಡೇ ತಿಂಗಳಲ್ಲಿ ಶೇ.38 ರಷ್ಟು ವಕ್ಭ್ ಆಸ್ತಿ ಹೆಚ್ಚಳವಾಗಿದೆ. ಸಾರ್ವಜನಿಕರು, ಮಠಾಧೀಶರು, ಬಿಜೆಪಿ ಪಕ್ಷದಿಂದ ಹೋರಾಟ ತೀವ್ರಗೊಂಡಾಗ ಸಿಎಂ ರೈತರ ಪಹಣಿಗಳಲ್ಲಿನ ವಕ್ಭ್ ಬೋರ್ಡ ಪದ ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಆದರೂ ತಹÀಶೀಲ್ದಾರರು , ಡಿಸಿ ಮಲಗಿದ್ದಾರೆಯೇ ಸಿಎಂ ಆದೇಶಕ್ಕೆ ಬೆಲೆ ಇಲ್ಲವೇ ? ಸಿಎಂ ಆದೇಶ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟರೂ ಅದಕ್ಕೆ ಸ್ಪಂದನೆ ಇಲ್ಲವಾಗಿದೆ.ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತ ವಿರೋಧಿ ಸರ್ಕಾರ ಎಂದು ಹೇಳಿದರು.

ಕೇವಲ ಬಾಯಿ ಮಾತಿನ ಮೇಲೆ ನೋಟೀಸ್ ವಾಪಸ್ ಪಡೆದುಕೊಂಡಿದ್ದೇನೆ ಎಂದು ಹೇಳಿದರೆ ಸಾಲದು. ವಕ್ಭ್ ಬೋರ್ಡ್ ಎಂದು ಎಂಟ್ರಿ ಮಾಡಿದ್ದನ್ನು ತೆಗೆದು ಹಾಕಬೇಕು. ಒಂದು ಎಕರೆ ಜಮೀನು ವಕ್ಭ್ ಬೋರ್ಡ್ಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದರು.

ಜಿಪಂ ಮಾಜಿ ಸದಸ್ಯ ಗಂಗಾಧರ ನಾಡಗೌಡ , ಹೋರಾಟಗಾರ ನಾಗಲಿಂಗಯ್ಯ ಮಠ ಮಾತನಾಡಿ, ಸರ್ಕಾರದ ಕ್ರಮ ವಿರುದ್ಧ ಆಕ್ರೋಶ ಹೊರಹಾಕಿದರು. ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ 400 ಎಕರೆ ಜಮೀನುಗಳ ಮೇಲೆ ವಕ್ಭ್ ಬೋರ್ಡ್ ಹೆಸರು ಇರುವುದನ್ನು ತೆಗೆದು ಹಾಕಬೇಕು ಎಂದು ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಶಾಸಕ ಅಪ್ಪಾಜಿ ಮೌನವೇಕೆ ?: ತಾಲ್ಲೂಕಿನ ರೈತರಿಗೆ ಅನ್ಯಾಯವಾಗುತ್ತಿದ್ದರೂ ಶಾಸಕರು ಏನು ಮಾಡುತ್ತಿದ್ದೀರಿ ? ರೈತರ ಆಸ್ತಿ ಲೂಟಿ ಹೊಡೆಯುವವರ ಪರವಾಗಿದ್ದೀರಾ ? ಎಂದು ಮಾಜಿ ಶಾಸಕ ನಡಹಳ್ಳಿ ಪ್ರಶ್ನಿಸಿದರು.ಸಿಎಂ ಹೇಳಿಕೆ ಕೊಟ್ಟಿದ್ದು, ಆ ಬಗ್ಗೆ ಶಾಸಕರು ಹೋರಾಟಗಾರರಿಗೆ ಮನವರಿಕೆ ಮಾಡಿಕೊಡಬೇಕಿತ್ತು.ಆದರೆ ಈವರೆಗೂ ಅವರಿಂದ ರೈತರಪರವಾಗಿ ಒಂದು ಹೇಳಿಕೆ ಇಲ್ಲ.ತಹಶೀಲ್ದಾರ್‌ಗೆ ತಿಳಿಸಿ ವಕ್ಭ್ ಬೋರ್ಡ ಕರ್ನಾಟಕ ಸರ್ಕಾರ ತಗೆದುಹಾಕಲು ತಿಳಿಸಬೇಕು ಎಂದು ಹರಿಹಾಯ್ದರು.ಮುಖಂಡ ಕೆಂಚಪ್ಪ ಬಿರಾದಾರ, ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, ಸಂಗಣ್ಣ ಕುಂಬಾರ,ರವಿ ಜಗಲಿ,ರವೀಂದ್ರ ಬಿರಾದಾರ, ರೈತ ಸಂಘಟನೆಯ ಮುಖಂಡ ಸಂಗಣ್ಣ ಬಾಗೇವಾಡಿ ಸೇರಿದಂತೆ ರೈತ ಮಹಿಳೆಯರು ಪಾಲ್ಗೊಂಡಿದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ