ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳುವ ಮೂಲಕ ಗೌರವ ಸಲ್ಲಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎ.ಗಣೇಶ ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ದೊಡ್ಡ ಶರಣರು,ನಾಯಕರ ಜಯಂತಿ ಕಾರ್ಯಕ್ರಮಗಳಿಗೆ ಅಷ್ಟೇ ಅಧಿಕಾರಿಗಳು ಆದ್ಯತೆ ಕೊಡುವ ಸಂಪ್ರದಾಯಕ್ಕೆ ಕಡಿವಾಣ ಹಾಕಿ ಎಲ್ಲ ಜಾತಿ,ಜನಾಂಗದವರ ಜಯಂತಿ ಕಾರ್ಯಕ್ರಮಗಳನ್ನು ಸಮಾನವಾಗಿ ಕಾಣಬೇಕು ಎಂದರಲ್ಲದೇ ಆರ್ಯ ಈಡಿಗ ಹಾಗೂ ಭಜಂತ್ರಿ ಸಮಾಜದಲ್ಲಿ ಅತೀ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ,ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯ ತಾಲ್ಲೂಕು ಆಡಳಿತದಿಂದ ಮಾಡಬೇಕು ಎಂದು ವಿನಂತಿಸಿದರು.

ನೂಲಿಯ ಚಂದಯ್ಯ ಸಮಾಜದ ತಾಲ್ಲೂಕು ಅಧ್ಯಕ್ಷ ನಾಗೇಶ ಭಜಂತ್ರಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ನಮ್ಮ ಶರಣರ ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಮುದ್ರಿಸಲು ತಾಲ್ಲೂಕು ಆಡಳಿತದಿಂದ ಆಗುತ್ತಿಲ್ಲ.ಕೇಳಿದರೆ ಸಿಬ್ಬಂದಿ ನೆಪಗಳನ್ನು ಹೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಜಯಂತಿ ಕಾರ್ಯಕ್ರಮದ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಬಿ.ಎಸ್.ಮುದ್ದೇಬಿಹಾಳ ಅವರ ಮೇಲೆ ಹರಿಹಾಯ್ದರು.

ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಮಾತನಾಡಿ, ಆ.28 ರಂದು ಬ್ರಹ್ಮಶ್ರೀ ನಾರಾಯಣಗುರು ಹಾಗೂ ನೂಲಿಯ ಚಂದಯ್ಯನವರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.ಎರಡೂ ವೃತ್ತಗಳನ್ನು ಅಲಂಕರಿಸಿ ವಿದ್ಯುತ್ ದೀಪಾಲಂಕಾರ ಮಾಡಲು ಪುರಸಭೆಯವರು ಕ್ರಮ ಕೈಗೊಳ್ಳುತ್ತಾರೆ.ಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಗಳನ್ನು ಮಾಡಿಸುವುದು,ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕೊಡುವ ಕಾರ್ಯದ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ಯುವ ಮುಖಂಡ ಉದಯ ರಾಯಚೂರ ಮಾತನಾಡಿದರು.ಸಭೆಯಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್,ಪಶು ಆಸ್ಪತ್ರೆಯ ವೈದ್ಯ ಡಾ.ಸುರೇಶ ಭಜಂತ್ರಿ,ಉಪ ನೋಂದಣಾಧಿಕಾರಿ ಸಚೀನ ಖೈನೂರ, ಟಿ.ವಿಜಯಭಾಸ್ಕರ್,ಶಿಕ್ಷಕ ಟಿ.ಡಿ.ಲಮಾಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,