Petition submitted by Panchamasaliga to Tehsildar: Do not allow another circle around Chennamma circle.

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ ಆಸುಪಾಸು 200 ಮೀಟರ್ ಸುತ್ತಮುತ್ತ ಅನ್ಯ ಮಹಾತ್ಮರ, ನಾಯಕರ ವೃತ್ತ, ಪ್ರತಿಮೆಗಳನ್ನು ಪ್ರತಿಷ್ಠಾಪಿಸದಂತೆ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಗುರುವಾರ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಮನವಿ ಪತ್ರವನ್ನು ಶಿರಸ್ತೇದಾರ ಎಂ. ಎಸ್. ಬಾಗೇವಾಡಿ ಅವರಿಗೆ ಸಲ್ಲಿಸಿದ ಸಮಾಜದ ಮುಖಂಡರು, 2009ರಲ್ಲಿ ಪುರಸಭೆಯಿಂದ ಅನುಮತಿ ಪಡೆದು ಸ್ವಾತಂತ್ರ್ಯ ಹೋರಾಟದಲ್ಲಿ ತನ್ನ ಕೊಡುಗೆ ನೀಡಿರುವ ಚೆನ್ನಮ್ಮನವರ ವೃತ್ತದ ಆಸುಪಾಸು ಅನ್ಯ ಸಮಾಜದವರ ಮಹಾತ್ಮರ ವೃತ್ತ, ಪ್ರತಿಮೆ ಸ್ಥಾಪನೆ ಮಾಡಬಾರದು. ಮಾಡಿದರೆ ಕೋಮುಗಲಭೆಗಳಿಗೆ ಕಾರಣವಾಗುವ ಸಾಧ್ಯತೆ ಇರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸಲ್ಲಿಕೆ ಸಮಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ಗೂಳಿ, ಮುಖಂಡರಾದ ಮುರಿಗೆಪ್ಪ ಹಡಲಗೇರಿ,ರಾಜಶೇಖರ ಹೊಳಿ, ಶರಣು ಸಾಲವಾಡಗಿ, ರಾಜಶೇಖರ ಮ್ಯಾಗೇರಿ, ಹಣಮಂತ ಕಲ್ಯಾಣಿ, ವೀರೇಶ ಢವಳಗಿ, ದಾನಪ್ಪ ಅಂಗಡಿ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ ಹೋದಾಗ ಒಣಗಿದ ಬೆಳೆಗಳನ್ನು ನೋಡಿದರೆ ಕಣ್ಣೀರು ಬರುತ್ತದೆ. ಅಧಿಕಾರಿಗಳು ಕಾಲುವೆಗೆ ನೀರು ಬಿಡಿ ಎಂದರೆ ತಯಾರಿಲ್ಲ.ಹೀಗೆ ಬದುಕುವ ಬದಲು ಸಾಯಲು ಅಧಿಕಾರಿಗಳೇ ವಿಷ ಕೊಡಿ ಎಂದು ರೈತ ಸಿದ್ದಪ್ಪ ಮಾದರ ಕೆಬಿಜೆಎನ್‌ಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಕೃಷ್ಣಾ ಭಾಗ್ಯ ಜಲ ನಿಗಮದ ಎ.ಎಲ್.ಬಿ.ಸಿ. ಉಪ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ