PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

PM Modi: ಕಡೆಗೂ ವಯನಾಡು ಜನರ ನೋವು ಆಲಿಸಿದ ಪ್ರಧಾನಿ ಮೋದಿ..!

Ad
Ad

Ad
Ad

ವಯನಾಡ್: ತೀವ್ರ ಮಳೆಯಿಂದ ಉಂಟಾದ ಭೀಕರ ಭೂಕುಸಿತದಿಂದ ನೂರಾರು ಜನರ ಸಾವಿಗೆ ಸಾಕ್ಷಿಯಾದ ಕೇರಳದ ವಯಾನಾಡುಗೆ 15 ದಿನಗಳ ಪ್ರಧಾನಿ ನರೇಂದ್ರ ಭೇಟಿ ನೀಡಿದ್ದು, ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ತೀವ್ರ ಭೂಕುಸಿತದಿಂದ ಸಾವು, ನೋವುಗಳಾಗಿ ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದರು, ಪ್ರಧಾನಿ ಮೋದಿ ಅವರು ವಯನಾಡುಗೆ ಭೇಟಿ ನೀಡದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Join Our Telegram: https://t.me/dcgkannada

ಇದರ ಬೆನ್ನಲ್ಲೇ ಇಂದು ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕ್ಕೆ ಪ್ರದೇಶಗಳಿಗೆ ಮೋದಿ (PM modi) ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ.

ಇದನ್ನೂ ಓದಿ: ಮೊಟ್ಟೆ ಕದ್ದ (Egg stolen) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು.. ಡಿಸ್​ಮಿಸ್ ಮಾಡಲು ಸೂಚನೆ (ವಿಡಿಯೋ ನೋಡಿ)

ಇದೇ ವೇಳೆ ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ(PM modi) ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ.

ದುರಂತದಿಂದ ಆಪ್ತರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಭೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಅವರು, ಸಾವಿರಾರು ಪರಿವಾರದ ಕನಸು ನುಚ್ಚುನೂರಾಗಿದೆ. ಪ್ರಕೃತಿ ರೌದ್ರ ರೂಪ ತೋರಿಸಿದೆ. ನಾನು ಆ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಜೊತೆಗೆ ಸಂತ್ರಸ್ತರ ಕೇಂದ್ರಗಳಿಗೂ ಭೇಟಿ ನೀಡಿ ಸಂತ್ರಸ್ತರಿಂದ ಎಲ್ಲಾ ವಿವರಗಳನ್ನು ಕೇಳಿದ್ದೇನೆ. ಆಸ್ಪತ್ರೆಯಲ್ಲೂ ಗಾಯಾಳುಗಳು ಕಷ್ಟದ ಪರಿಸ್ಥಿತಿಯನ್ನು ನೋಡಿದ್ದೇನೆ.

ನಮಗೆ ದುರ್ಘಟನೆಯಲ್ಲಿ ಮಡಿದ ಜನರನ್ನು ವಾಪಸ್ ತರಲು ಸಾಧ್ಯವಿಲ್ಲ. ಆದರೆ ಅಲ್ಲಿನ ಸಂತ್ರಸ್ತರಿಗೆ ಭವಿಷ್ಯಕ್ಕೆ ಸಹಾಯವನ್ನು ಮಾಡುತ್ತೇವೆ. ದೇಶ ಹಾಗೂ ಕೇಂದ್ರ ಸರ್ಕಾರ ಇಲ್ಲಿನ ಜನರ ಜೊತೆ ಇದ್ದೇವೆ. ವಯನಾಡಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದವರ ಜೊತೆ ನಮ್ಮ ಪ್ರಾರ್ಥನೆ ಇದೆ.

ಪರಿಹಾರ ಕಾರ್ಯಗಳಲ್ಲಿ ಸಹಾಯ ಮಾಡಲು ಸಾಧ್ಯವಿರುವ ಎಲ್ಲ ಬೆಂಬಲವನ್ನು ಕೇಂದ್ರವು ಭರವಸೆ ನೀಡುತ್ತದೆ ಎಂದರು.

Latest News

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಆಂಜನೇಯ (35) ಪತ್ನಿ ಗಂಗಮ್ಮ (28) & ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸುರಪುರ ಠಾಣೆಯಲ್ಲಿ ಈ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು