Police lathi charge: Crowds flocked to DJ folk fair

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು.

ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ, ಸಿದ್ಧರಾಜ ಹೊಳಿ ಮೊದಲಾದವರು ದಾಂಧಲೆ ಎಬ್ಬಿಸುತ್ತಿದ್ದವರಿಗೆ ಹಲವು ಬಗೆಯಲ್ಲಿ ತಿಳಿ ಹೇಳಿದರು.

ಕಮೀಟಿಯವರ ಮಾತು ಕೇಳದೇ ಗದ್ದಲ ಮುಂದುವರೆದಾಗ ಅನಿವಾರ್ಯವಾಗಿ ಪೊಲೀಸರು ಲಘುವಾಗಿ ಗುಂಪಿನತ್ತ ಲಾಠಿ ಬೀಸಿದರು. ಇದರಿಂದ ಕೆಲಕಾಲ ಕಾರ್ಯಕ್ರಮದಲ್ಲಿ ಗೊಂದಲದ ವಾತಾವರಣ ಉಂಟಾಗಿತ್ತು. ಪಿಎಸ್‌ಐ ಸಂಜಯ ತಿಪರೆಡ್ಡಿ ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ ಬಳಿಕ ಕಾರ್ಯಕ್ರಮ ಯಥಾಸ್ಥಿತಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನವಯುಗದ ಜಾನಪದ ಡಿಜೆ ಗಾಯಕರಾದ ಮ್ಯೂಜಿಕ್ ಮೈಲಾರಿ, ಮಾಳು ನಿಪನಾಳ, ಮುತ್ತು ಹಳಿಯಾಳ, ಲಕ್ಷ್ಮಿ ವಿಜಯಪುರ, ಸುದೀಪ ಹೆಳವರ, ತೃಪ್ತಿ ಧಾರವಾಡ, ಸಂಜನಾ, ಪರಸು ಕೋಲೂರ ಮೊದಲಾದವರು ನೆರೆದಿದ್ದ ಜನರಿಗೆ ತಮ್ಮದೇ ಶೈಲಿಯಲ್ಲಿ ರಚಿಸಿದ ಹಾಡುಗಳನ್ನು ಹಾಡಿ ರಂಜಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಸಂಗಣ್ಣ ಮೇಲಿನಮನಿ ತಮ್ಮ ಜೇಬಿನಿಂದ ಐದು ನೂರು ರೂ.ಕೊಟ್ಟು ಹಳೆಯ ಕಾಲದ ಬಾಳ ಬಂಗಾರ ನೀನು, ಮನೆಯ ಸಿಂಗಾರ ನೀನು ಹಾಡನ್ನು ಜಾನಪದ ಕಲಾವಿದರಿಂದ ಹಾಡಿಸಿದ್ದು ಗಮನ ಸೆಳೆಯಿತು. ಸ್ಥಳೀಯ ಕಲಾವಿದರಾದ ಶ್ರೀಶೈಲ ಹೂಗಾರ, ಗೋಪಾಲ ಹೂಗಾರ, ಚಂದ್ರು ಕಲಾಲ ಮೊದಲಾದವರು ವೇದಿಕೆ ನಿರ್ವಹಣೆ ಮಾಡಿದರು. ಸುಮಾರು 20 ಸಾವಿರಕ್ಕೂ ಅಧಿಕ ಜನ ಪಾಲ್ಗೊಂಡಿದ್ದರು. ಮಧ್ಯರಾತ್ರಿ 2 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು. ಕೆಲವರು ಪುರಸಭೆಯ ಹಳೆಯ ಕಾಲದ ಮಳಿಗೆಗಳ ಶಿಥಿಲ ಛಾವಣಿ ಮೇಲೆ ಕೂತು ಸಂಘಟಕರಿಗೆ ಆತಂಕವನ್ನುಂಟು ಮಾಡಿದ ಪ್ರಸಂಗವೂ ನಡೆಯಿತು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ