Power problem: Protest by angry farmers

ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ಕುಳಗೇರಿ: ಗೊಲಕೊಪ್ಪ, ಬಿರನೂರು, ತಳಕವಾಡ, ಆಲೂರು ಎಸ್. ಕೆ, ಹಾಗನೂರು, ತರಲಕೊಪ್ಪ ಗ್ರಾಮಗಳಿಗೆ ಜನವರಿ ತಿಂಗಳಿನಿಂದ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ಸತಾಯಿಸುತ್ತಿರುವ ಕುಳಗೇರಿ ಕೆಇಬಿ ಘಟಕದ ಮುಂದೆ ಇಂದು ರೈತರು ಪ್ರತಿಭಟನೆ ಮಾಡಿದ್ದಾರೆ. ಕೆಇಬಿ ಮುಂದೆ ರೈತರು ಕಟ್ಟಿಗೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟಿಸಿ, ಸರಿಯಾಗಿ ವಿದ್ಯುತ್ ನೀಡದಿದ್ದರೆ ಓರ್ವ ರೈತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ರೈತ ಕಾಮಣ್ಣ ಧರಿಯಪ್ಪ ಹೆಬ್ಬಳಿ ಎಂಬ ರೈತನೋರ್ವ, ಇನ್ನಮುಂದೆ ತಮ್ಮ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಘಟಪ್ರಭಾ ನದಿ ತೀರದಲ್ಲಿರುವ ಗ್ರಾಮಗಳಿಗೆ ವಿದ್ಯುತ್ ಸಮಸ್ಯೆಯಿಂದಾಗಿ ದಿನನಿತ್ಯ ಬಳಕೆಗೆ ನೀರಿನ ಅಭಾವ ಉಂಟಾಗಿದೆ. ಜನಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳಿಗೆ ನೀರು ಉಣಿಸಲು ಆಗುತ್ತಿಲ್ಲ ಎಂದು ರೈತ ಯಲ್ಲಪ್ಪಗೌಡ ಸಿದ್ದನಗೌಡ ದೇಸಾಯಿಗೌಡ್ರ ನೋವು ತೋಡಿಕೊಂಡರು.

ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದಿರುವುದರಿಂದ ಸಣ್ಣಮಕ್ಕಳಿಗೆ ರಾತ್ರಿ ಸಮಯದಲ್ಲಿ ಸಮಸ್ಯೆಯಾಗುತ್ತಿದೆ. ಬೇಸಿಗೆ ಸಮಯದಲ್ಲಿ ವಯಸ್ಕರಿಗೂ ತೊಂದರೆ ಆಗುತ್ತಿದೆ. ಆದಕಾರಣ, ನಮ್ಮ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ನೀಡಿ, ನಮ್ಮ ಗ್ರಾಮದ ಲೈನ್ ಮನ್ ಯಾರು ಅವರ ನಂಬರ್ ಹಾಗೂ ಮಾಹಿತಿ ಕೊಡಿ ಎಂದು ರೈತ ಸಂಗನಗೌಡ ಮರಿತಮನಗೌಡ ಶಿವನಗೌಡ್ರ ತಮ್ಮ ಆಕ್ರೋಶವನ್ನು ಹೊರಹಾಕಿದರು.

ವಿದ್ಯುತ್ ಸಮಸ್ಯೆಯಾಗದಂತೆ, ಇನ್ನಮುಂದೆ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡಲಾಗುವುದು ಎಂದು ಬಾದಾಮಿ ಕೆಇಬಿ‌ ಅಧಿಕಾರಿ ಭರವಸೆ ನೀಡಿದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ