ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೇತೃತ್ವ ಹಾಗೂ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಜು.28 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೇಗೆ ಕಾನಿಪ ಧ್ವನಿ ಸಂಘಟನೆ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಕಾರ್ಯಕ್ರಮಗಳ ವಿವರ ನೀಡಿದರು.

ಅಂದು ಬೆಳಗ್ಗೆ 9 ಗಂಟೆಗೆ ಡಾ.ಪದಕಿ ದವಾಖಾನೆ ಹಿಂದೆ ಇರುವ ಶ್ರೀ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಉಚಿತ ತಪಾಸಣೆ ಶಿಬಿರ ನಡೆಯಲಿದೆ.

ಬೆಳಗ್ಗೆ 10.30ಕ್ಕೆ ಪಟ್ಟಣದ ಅಂಬೇಡ್ಕರ್ ಸಭಾಭವನದ ಪಕ್ಕದಲ್ಲಿರುವ ಸರಕಾರಿ ಪಿಯು ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ನಿಮಿತ್ಯ ಸಾಧಕರಿಗೆ ಸನ್ಮಾನ,ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಾಧ್ಯಮವಾರು ಮೂರು ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ವಿವಿಧ ಸಮಾಜದ ರುದ್ರಭೂಮಿಗಳಲ್ಲಿ ಸೇವೆ ಮಾಡುವ ಸೇವಾಕರ್ತರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು ಹಾಲಿ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹಾಗೂ ಮಾಜಿ ಶಾಸಕರಾದ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಹಾಗೂ ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು.

ವಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು.ಕಾ.ನಿ.ಪ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾನಿಪ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷ ಮಹ್ಮದಯೂಸೂಫ್ ನೇವಾರ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ,ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ತಹಸೀಲ್ದಾರ್ ಬಲರಾಮ ಕಟ್ಟಿಮನಿ,ತಾಪಂ ಪ್ರಭಾರಿ ಇಒ ಆರ್.ಎಸ್.ಹಿರೇಗೌಡ್ರ, ಪಿ.ಎಸ್.ಐ ಸಂಜಯ ತಿಪರೆಡ್ಡಿ,ಗೃಹರಕ್ಷಕ ದಳದ ಘಟಕಾಧಿಕಾರಿ ಉಮೇಶ ಕಡಿ,ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಸಮಾಜ ಸೇವಕಿ ಸಂಗೀತಾ ನಾಡಗೌಡ್ರ,ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶೀಬಾಯಿ ರಾಂಪೂರ,ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಆಗಮಿಸುವರು ಎಂದು ತಿಳಿಸಿದರು.

ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಾರುತಿ ಹಿಪ್ಪರಗಿ ಮಾತನಾಡಿ,ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿಭಾಗೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಕರಾದ ಬುರಾನಸಾಬ ರುದ್ರವಾಡಿ,ಹಾಜಿಸಾಬ ರುದ್ರವಾಡಿ, ಟಿ5 ನಿರೂಪಕ ಸಂತೋಷ ರಾಠೋಡ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಜಿಲ್ಲಾ ಕಾರ್ಯದರ್ಶಿ ರವಿ ಹಡಪದ(ತೇಲಂಗಿ), ಕಾರ್ಯಕಾರಿ ಸಮಿತಿ ಸದಸ್ಯ ರವಿ ದಂಡಿನ, ಖಜಾಂಚಿ ಹನಮಂತ ನಲವಡೆ,ಸದಸ್ಯರಾದ ಅನಿಲ್ ಹಡಪದ(ತೇಲಂಗಿ), ಅಡಿವೆಪ್ಪ ಕನ್ನೂರ, ಬಸವರಾಜ ಕುಂಟೋಜಿ, ಬಸಲಿಂಗಪ್ಪ ಹೂಗಾರ, ವಿನಯಕುಮಾರ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು.

Latest News

Ein Weg zum Reichtum auf dem Hühnerweg des Spiels

Das Slot-Spiel "Chicken Road Spiel" ist ein atemberaubendes Abenteuer durch die

Chicken Roads Gewinnstrategie und Taktik

Einführung Die Welt der Online-Slots ist reich an ansprechenden Themen und

Exploring the Features of Chickens in Slots Games on Chicken Road by InOut

Chicken Road is a slot game developed by InOut, a renowned

Der Betrogene in dem Spiel namens Unüberschreitbare Stürme

In diesem Artikel wird das beliebte Casino-Spiel "Uncrossable Rush" untersucht und

Escape with Chickens in Casino Slot Chicken Run by PoggiPlay

PoggiPlay's "Chicken Run" is a casino slot game that combines farming-themed fun with exciting gameplay elements. Developed to cater to fans of classic slots, as well as those looking for something new and engaging, this 5-reel, 10-payline video slot offers an immersive experience. Theme and Design The theme of Chicken

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ. ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ ಮೂಲಕ ಮಾಹಿತಿ ಪಡೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊoಡಿದ್ದ ಫೋಟೋ ಅಸಲಿ ಅಲ್ಲ.ಸದರಿ ಸ್ಥಳಕ್ಕೆ ನಮ್ಮ ಇಲಾಖೆಯ ಗಸ್ತು ಪಾಲಕ ವಿಠಲ