ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೇತೃತ್ವ ಹಾಗೂ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಜು.28 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೇಗೆ ಕಾನಿಪ ಧ್ವನಿ ಸಂಘಟನೆ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಕಾರ್ಯಕ್ರಮಗಳ ವಿವರ ನೀಡಿದರು.
ಅಂದು ಬೆಳಗ್ಗೆ 9 ಗಂಟೆಗೆ ಡಾ.ಪದಕಿ ದವಾಖಾನೆ ಹಿಂದೆ ಇರುವ ಶ್ರೀ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಗೆ ಇಸಿಜಿ, ಆರ್.ಬಿ.ಎಸ್ ಉಚಿತ ತಪಾಸಣೆ ಶಿಬಿರ ನಡೆಯಲಿದೆ.
ಬೆಳಗ್ಗೆ 10.30ಕ್ಕೆ ಪಟ್ಟಣದ ಅಂಬೇಡ್ಕರ್ ಸಭಾಭವನದ ಪಕ್ಕದಲ್ಲಿರುವ ಸರಕಾರಿ ಪಿಯು ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ನಿಮಿತ್ಯ ಸಾಧಕರಿಗೆ ಸನ್ಮಾನ,ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮಾಧ್ಯಮವಾರು ಮೂರು ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ಹಾಗೂ ವಿವಿಧ ಸಮಾಜದ ರುದ್ರಭೂಮಿಗಳಲ್ಲಿ ಸೇವೆ ಮಾಡುವ ಸೇವಾಕರ್ತರಿಗೆ ಸನ್ಮಾನ ಸಮಾರಂಭ ನಡೆಯಲಿದ್ದು ಹಾಲಿ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹಾಗೂ ಮಾಜಿ ಶಾಸಕರಾದ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಕಾರ್ಯಕ್ರಮಕ್ಕೆ ಶುಭ ಕೋರಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು ಹಾಗೂ ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ವಹಿಸುವರು.
ವಿಡಿಸಿಸಿ ಬ್ಯಾಂಕ್ ನಿರ್ದೇಶಕಿ ಸಂಯುಕ್ತಾ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು.ಕಾ.ನಿ.ಪ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಕಾನಿಪ ಧ್ವನಿ ಜಿಲ್ಲಾ ಘಟಕದ ಅಧ್ಯಕ್ಷ ಮಹ್ಮದಯೂಸೂಫ್ ನೇವಾರ,ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ,ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ್ ನಡಹಳ್ಳಿ,ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ತಹಸೀಲ್ದಾರ್ ಬಲರಾಮ ಕಟ್ಟಿಮನಿ,ತಾಪಂ ಪ್ರಭಾರಿ ಇಒ ಆರ್.ಎಸ್.ಹಿರೇಗೌಡ್ರ, ಪಿ.ಎಸ್.ಐ ಸಂಜಯ ತಿಪರೆಡ್ಡಿ,ಗೃಹರಕ್ಷಕ ದಳದ ಘಟಕಾಧಿಕಾರಿ ಉಮೇಶ ಕಡಿ,ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ.ಶಿವಯೋಗಿಮಠ, ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ್, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಸಮಾಜ ಸೇವಕಿ ಸಂಗೀತಾ ನಾಡಗೌಡ್ರ,ಕದಳಿ ವೇದಿಕೆ ತಾಲ್ಲೂಕು ಅಧ್ಯಕ್ಷೆ ಕಾಶೀಬಾಯಿ ರಾಂಪೂರ,ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ ಆಗಮಿಸುವರು ಎಂದು ತಿಳಿಸಿದರು.
ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಾರುತಿ ಹಿಪ್ಪರಗಿ ಮಾತನಾಡಿ,ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಿಭಾಗೀಯ ಸೇವಾ ಪ್ರಶಸ್ತಿ ಪುರಸ್ಕೃತರಾದ ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಕರಾದ ಬುರಾನಸಾಬ ರುದ್ರವಾಡಿ,ಹಾಜಿಸಾಬ ರುದ್ರವಾಡಿ, ಟಿ5 ನಿರೂಪಕ ಸಂತೋಷ ರಾಠೋಡ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ,ಜಿಲ್ಲಾ ಕಾರ್ಯದರ್ಶಿ ರವಿ ಹಡಪದ(ತೇಲಂಗಿ), ಕಾರ್ಯಕಾರಿ ಸಮಿತಿ ಸದಸ್ಯ ರವಿ ದಂಡಿನ, ಖಜಾಂಚಿ ಹನಮಂತ ನಲವಡೆ,ಸದಸ್ಯರಾದ ಅನಿಲ್ ಹಡಪದ(ತೇಲಂಗಿ), ಅಡಿವೆಪ್ಪ ಕನ್ನೂರ, ಬಸವರಾಜ ಕುಂಟೋಜಿ, ಬಸಲಿಂಗಪ್ಪ ಹೂಗಾರ, ವಿನಯಕುಮಾರ ಕಡ್ಲಿಮಟ್ಟಿ, ಹಣಮಂತ ಚವ್ಹಾಣ ಇದ್ದರು.