ಬೆಂಗಳೂರು: ಪದವಿ ಮುಗಿಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಘೋಷಿಸಬೇಕು. 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು 2016ರ ಮೊದಲು ನೇಮಕಗೊಂಡವರಿಗೆ ಪೂರ್ವಾನ್ವಯಗೊಳಿಸಬಾರದು ಎಂಬುದು ಸೇರಿದಂತೆ ತಮ್ಮ ಅನೇಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆ.12ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಮಟ್ಟದ ಬ್ರಹತ್ ಪ್ರತಿಭಟನೆ ನಡೆಸಲಿದೆ.
ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀ ಧರ ಶಿಕ್ಷರೆಂದು ಪರಿಗಣಿಸಿ ಮುಂದಿನ ಅವರ ಸೇವಾ ಬಡ್ತಿಗೆ ಪರಿಗಣಿಸಬೇಕು. ಅದೇ ರೀತಿ 2017ರ ಹೊಸ ನಿಯಮ ಜಾರಿಯಿಂದ 1ರಿಂದ 7ನೇ ತರಗತಿವರೆಗಿನ ಬೋಧನೆ ಗೆಂದು ನೇಮಕಾತಿ ಮಾಡಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 1ರಿಂದ 5ನೇ ತರಗತಿ ಬೋಧನೆಗೆ ಮಾತ್ರ ಸೀಮಿತ ಎಂದು ಹಿಂಬಡ್ತಿ ನೀಡಲಾಗಿದೆ.
ಅದೇ ರೀತಿ ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡುವಲ್ಲಿ ಸಾಕಷ್ಟು ಅನ್ಯಾಯವಾಗುತ್ತಿದೆ. ಈ ಎಲ್ಲದರ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿ ಅನ್ಯಾಯ ಸರಿಪಡಿಸಲು ಬೇಡಿಕೆ ಇಟ್ಟರೂ ಪ್ರಯೋ ಜನವಾಗಿಲ್ಲ ಹಾಗಾಗಿ ಹೋರಾಟ ಅನಿವಾ ರ್ಯವಾಗಿದೆ ಎಂದು ಸಂಘದ ಅಧ್ಯಕ್ಷತೆ, ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರ ಶೇಖರ ನುಗ್ಗಲಿ ಎಂದು ತಿಳಿಸಿದ್ದಾರೆ.
2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಅವಧಿ ಮುಗಿಯುವವೆಗೂ ಮೊದಲಿನಂತೆ 1ರಿಂದ 8ನೇ ತರಗತಿ ವರೆಗೆ ಬೋಧನೆಗೆ ಅವಕಾಶ ನೀಡಬೇಕು. ಸೇವಾ ಜೇಷ್ಠತೆ ಮೇಲೆ ಅವರಿಗೆ ಪ್ರೌಢ ಶಾಲೆಗೆ ಬಡ್ಡಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಪದವೀಧರ ಶಿಕ್ಷಕರಿಗೆ ಪ್ರೌಢ ಶಾಲಾ ಬಡ್ತಿಗೆ ಅವಕಾಶ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.