ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ.
ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟ್‌ನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬAಧಿಸಿದAತೆ ಒಬ್ಬ ಆರೋಪಿಯನ್ನು ಬಂಧಿಸಿದ್ದು ಇನ್ನೋರ್ವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾಗಿ ಪಿಎಸ್‌ಐ ಸಂಜಯ ತಿಪರೆಡ್ಡಿ ತಿಳಿಸಿದ್ದಾರೆ.ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್ನ ಕೊಟ್ಟ ಸಂಸ್ಥೆ ಸ್ಮರಣೆ: ಸಾಯುವ ಮುನ್ನ ಚೆನ್ನಯ್ಯ ಬರೆದಿರುವ ಡೆತ್ ನೋಟ್‌ನಲ್ಲಿ ತಮಗೆ ಅನ್ನ ಹಾಕಿ ಸಲುಹಿದ ವೀರಶೈವ ವಿದ್ಯಾವರ್ಧಕ ಸಂಸ್ಥೆಯ ಹಿಂದಿನ ಹಾಗೂ ಈಗಿನ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ತಿಳಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.






