ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ ಜಾಗೃತಿ ಕಾರ್ಯಕ್ರಮವನ್ನು ಸರ್ಕಾರದಿಂದ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಹೇಳಿದರು.
ಪಟ್ಟಣದ ಶಾ ಎಸ್.ಪಿ.ಓಸ್ವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಸಕಾಂಗ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿಕೊಡುವುದು ಈ ಕಾರ್ಯಕ್ರಮ ಉದ್ದೇಶವಾಗಿದ್ದು ಮುಂದಿನ ಪೀಳಿಗೆ ಪ್ರಜಾಪ್ರಭುತ್ವದ ಸೌಂದರ್ಯವನ್ನು ಮತ್ತಷ್ಟು ಇಮ್ಮಡಿಸುವುದು ಈ ಕಾರ್ಯಕ್ರಮದ ಧ್ಯೇಯವಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ,ಬಿಇಓ ಎಂ.ಎಸ್.ಬಡದಾನಿ ಮಾತನಾಡಿ, ಯುವ ಸಂಸತ್ತನಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು ಕರ್ನಾಟಕ ವಿಧಾನಸಭೆ,ವಿಧಾನಮಂಡಲಗಳ ಕಾರ್ಯಕಲಾಪಗಳಲ್ಲಿ ನಡೆಯುವ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ತಿಳಿದುಕೊಂಡು ಭವಿಷ್ಯದಲ್ಲಿ ಉತ್ತಮ ಸಮಾಜದ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದರು.
ಹಡಲಗೇರಿ ವಸತಿಯುಕ್ತ ಸರಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್,ಕಾಲೇಜಿನ ಪ್ರಾಚಾರ್ಯ ಎಚ್.ಟ.ಕಟಗೂರ ಮೊದಲಾದವರು ಇದ್ದರು.







