Properly conduct property survey in Hubli-Dharwad twin city: Minister Santosh Lad

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಮಹಾನಗರ ಪಾಲಿಕೆಯಿಂದ ವಿವಿಧ ಉದ್ದೇಶಗಳಿಗಾಗಿ ಬಹಳಷ್ಟು ವರ್ಷಗಳ ಹಿಂದೆ 999 ವರ್ಷ, 99 ವರ್ಷ ಹೀಗೆ ಬಹು ವರ್ಷಗಳ ಅವಧಿಗೆ ಸುಮಾರು 2,474 ರಷ್ಟು ಮಹಾನಗರ ಪಾಲಿಕೆಯ ಆಸ್ತಿಗಳನ್ನು ಲೀಜ್ ಗೆ ಕೊಡಲಾಗಿದೆ. ಇದನ್ನು ಕೆಲವರು ನಿಯಮಬಾಹಿರವಾಗಿ ಮತ್ತೊಬ್ಬರಿಗೆ ಮಾರಾಟ ಮಾಡಿರುವುದು ತಿಳಿದು ಬಂದಿದೆ. ಈ ಕುರಿತು ಪರಿಶೀಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕರ ವಸೂಲಾತಿಯಲ್ಲಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ಸೈಟ್, ನಿರ್ಮಾಣಗಳು ಆಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲಸೌಕರ್ಯ ನೀಡಲು ಸಮಸ್ಯೆಗಳು ಆಗುತ್ತಿವೆ. ಈ ಬಗ್ಗೆ ಕ್ರಮ ವಹಿಸಬೇಕು. ಪ್ರತಿ ವಲಯದಲ್ಲಿ ಈ ಕುರಿತು ಅಭಿಯಾನ ಆಗಬೇಕು ಎಂದು ತಿಳಿಸಿದರು.

ಕೃಷಿ ಭೂಮಿ 5 ಗುಂಟೆ ಸೈಟ್ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದು ಅನಧಿಕೃತ. ಇದನ್ನು ನಿಲ್ಲಿಸಲು ಗಂಭಿರವಾಗಿ ಪರಿಗಣಿಸಬೇಕು. ನೋಂದಣಿ ಮತ್ತು ಮುದ್ರಾಂಕ ಇಲಾಖೆ, ಸರ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳು ಜಂಟಿಯಾಗಿ ಕ್ರಮವಹಿಸಬೇಕು. ಫಲವತ್ತಾದ ಕೃಷಿ ಭೂಮಿಯನ್ನು ಮನೆ ಕಟ್ಟಲು ಪ್ಲಾಟ್‍ಗಳನ್ನಾಗಿ ಪರಿವರ್ತಿಸಿ, ಮಾರುವುದು ಕಾನೂನುಬಾಹಿರವಾಗಿದೆ. ಈ ಸಂಗತಿಯು ಮುಂದಿನ ದಿನಮಾನಗಳಲ್ಲಿ ಅನೇಕ ರೀತಿಯಿಂದ ತೊಂದರೆ ಆಗಬಹುದು ಎಂದು ಸಚಿವರು ಹೇಳಿದರು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಸುಮಾರು 149 ಕೋಟಿ ರೂ.ಗಳ ಬಾಕಿಯಿದೆ. ಜನರಿಗೆ ಸರಿಯಾದ ಸಮಯಕ್ಕೆ ನಿಗಧಿತ ದಿನಗಳಲ್ಲಿ ನೀರು ಸರಬರಾಜು ಮಾಡಬೇಕು. ಎಲ್ಲ ಬಾಕಿ ವಸೂಲಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒನ್ ಟೈಮ್ ಸೆಟ್ಲಮೆಂಟ್ ಮಾಡಲು ಬಹಳಷ್ಟು ಶಾಸಕರು ಮತ್ತು ಅಧ್ಯಕ್ಷರು ಒತ್ತಡ ತರುತ್ತಿದ್ದಾರೆ. ಅವರು ಮನವಿ ಸಲ್ಲಿಸಿದ ನಂತರ ಸರ್ಕಾರದ ಗಮನಕ್ಕೆ ತರುತ್ತೇನೆ. ಬಾಕಿ ಮೊತ್ತದ ಬಡ್ಡಿ ಮನ್ನಾ ಮಾಡಲು ಸರಕಾರಕ್ಕೆ ಒನ್ ಟೈಮ್ ಸೆಟ್ಲಮೆಂಟ್ ಆದೇಶಕ್ಕಾಗಿ ಪಾಲಿಕೆಯಿಂದ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಸಚಿವರು ತಿಳಿಸಿದರು.

ಅನುಮತಿ ಇಲ್ಲದ ಪಿಜಿಗಳಿಗೆ ನೋಟಿಸ್ ನೀಡಿ, ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ: ಲಕ್ಷಾಂತರ ಯುವಕ, ಯುವತಿಯರು ಓದು, ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೇರೆ ಬೇರೆ ಜಿಲ್ಲೆಗಳಿಂದ, ರಾಜ್ಯಗಳಿಂದ ಬಂದು ಅವಳಿ ನಗರದಲ್ಲಿ ವಾಸಿಸುತ್ತಿದ್ದಾರೆ. ಇವರಿಗೆ ವಸತಿ, ಊಟ ಕಲ್ಪಿಸುವ ಪಿಜಿಗಳ ಬಹುತೇಕ ಮಾಲೀಕರು ಸಂಬಂಧಿಸಿದ ಪ್ರಾಧಿಕಾರದಿಂದ ಅಧಿಕೃತ ಅನುಮತಿ, ಫರ್ಮಿಷನ್ ಪಡೆದಿರುವದಿಲ್ಲ ಎಂಬುದು ತಿಳಿದು ಬಂದಿದೆ ಎಂದರು.

ಅವಳಿನಗರದ ಎಲ್ಲ 12 ವಲಯ ಸಹಾಯಕ ಆಯುಕ್ತರು ತಮ್ಮ ವಲಯದ ಎಲ್ಲ ವಾರ್ಡಗಳಲ್ಲಿ ಸಮೀಕ್ಷೆ ಮಾಡಿ, ಪಿಜಿಗಳು ಎಷ್ಟಿವೆ, ಎಷ್ಟು ಜನ ವಾಸಿಸುತ್ತಿದ್ದಾರೆ, ಮಾಲೀಕರು ಪಿಜಿ ವಾಸಿಗಳ ವೈಯಕ್ತಿಕ ವಿವರ ಪಡೆದಿರುವ ಬಗ್ಗೆ, ಸಮೀಪದ ಪೊಲೀಸ್ ಠಾಣೆಗೆ ಪಿಜಿ ಆರಂಭಿಸಿದ ಕುರಿತು ಮಾಹಿತಿ ನೀಡಿರುವ ಬಗ್ಗೆ ಮತ್ತು ಪಿಜಿಯಲ್ಲಿ ಸಿಸಿಟಿವಿ, ಪಾರ್ಕಿಂಗ್, ವಾಣಿಜ್ಯ ಬಳಕೆಗೆ ವಿದ್ಯತ್, ಕುಡಿಯುವ ನೀರು ಸೌಲಭ್ಯ ಹಾಗೂ ಪಾಲಿಕೆಗೆ ಕಮರ್ಸಿಯಲ್ ಟ್ಯಾಕ್ಸ್ ಭರಿಸುತ್ತಿರುವ ಬಗ್ಗೆ ನಿಗಧಿತ ನಮೂನೆಯಲ್ಲಿ ಮಾಹಿತಿ ಸಂಗ್ರಹಿಸಬೇಕು ಮತ್ತು ತಕ್ಷಣ ಅನಧಿಕೃತ ಪಿಜಿಗಳಿಗೆ ನೋಟಿಸ್ ನೀಡಬೇಕೆಂದು ಸಚಿವ ಸಂತೋಷ ಲಾಡ್ ಅವರು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷ ಬಿರಾದಾರ, ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಅಭಿಯಂತರರು, ಸಿಬ್ಬಂದಿ ಇತರರು ಭಾಗವಹಿಸಿದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು