ಬಾಗಲಕೋಟೆ: ಸಿಎಂ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬರು ಬೆಂಕಿಹೆಚ್ಚಿಕೊಳ್ಳಲು ಯತ್ನಿಸಿದ ಘಟನೆ ಬಾಗಲಕೋಟೆ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನೆ (Protest) ವೇಳೆ ಸಂಭವಿಸಿದೆ.
ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುನತಿ ನೀಡಿದ್ದನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಮ್ಮಿಕೊಂಡ ಪ್ರತಿಭಟನಾ (Protest) ಮೆರವಣಿಗೆ ವೇಳೆ ಈ ಘಟನೆ ಜರುಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada
ನಗರದ ಜಿಲ್ಲಾಡಳಿತದ ಸಮೀಪ ಪ್ರತಿಭಟನಾಕಾರರು ಟಯರ್’ಗೆ ಬೆಂಕಿ ಹಚ್ಚಿ,ಕೇಂದ್ರ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಏಟು ನೀಡಿ, ಬೆಂಕಿ ಹಚ್ಚಿ ಪ್ರತಿಭಟಿಸುತ್ತಿದ್ದ ವೇಳೆ ಅಲ್ಲಿಯೇ ಇದ್ದ ಸಿದ್ಧರಾಮಯ್ಯನವರ ಅಭಿಮಾನಿ ಪೆಟ್ರೋಲ್ ಕಸಿದಯ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ಮತ್ತೊಬ್ಬ ಪ್ರತಿಭಟನಾಕರನಿಗೂ ಬೆಂಕಿ ತಗುಲಿದೆ. ಕೂಡಲೇ ಸ್ಥಳದಲ್ಲಿದ್ದವರು ತಡೆದು, ಪೊಲೀಸರ ಸಹಾಯದಿಂದ ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಗುಳೇದಗುಡ್ಡ ಸಮೀಪದ ನಾಗರಾಳ ಎಸ್.ಪಿ.ಗ್ರಾಮದ ನಿವಾಸಿ ದ್ಯಾವಪ್ಪ ಮಾಗಿ ಎಂದು ಗುರುಸಲಾಗಿದೆ. ಪಕ್ಕದಪಕ್ಕದಲ್ಲೇ ಇದ್ದ ಹಿರಿಯರಿಗೆ ಸಣ್ಣ ಗಾಯವಾಗಿದೆ ಎಂದು ತಿಳಿದು ಬಂದಿದೆ.
ವ್ಯಕ್ತಿ ಕೈ, ಮೈ, ಕುತ್ತಿಗೆ, ಎದೆ,ವಬೆನ್ನು ಸೇರಿ ಹಲವೆಡೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: V Somanna: ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದ ಸಂಸದ.. ಕಚೇರಿ ಉದ್ಘಾಟಿಸಿದ ಸೋಮಣ್ಣ
ಕೈ ಪಡೆ ಕೆಂಡಾಮಂಡಲ.. ರಾಜ್ಯಪಾಲರ ಕಚೇರಿ ಮುತ್ತಿಗೆ ಯತ್ನ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಸಲ್ಲಿಕೆಗೆ ಅನುಮತಿ ನೀಡಿದ ರಾಜ್ಯಪಾಲರ ನಿರ್ಣಯವನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಚುರುಕಾಗಿ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ.
ಈ ವೇಳೆ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದಂತೆ ಹಲವು ಸಚಿವರೂ ಸಹ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿರುವುದರಿಂದ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದೆ.
ಮೈಸೂರು, ತುಮಕೂರು, ಬೆಳಗಾವಿ, ದಾವಣಗೆರೆ ಮುಂತಾದೆಡೆ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಸಿಎಂ ಪರ ಘೋಷಣೆ ಕೂಗಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಮಂಡ್ಯದಲ್ಲಿ ಅಹಿಂದ ಬಳಗ ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ. ನರಸೀಪುರದಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಕಮಲ-ದಳ ಪಕ್ಷಗಳು ಜಂಟಿಯಾಗಿ ಇಂದು ಬೆಂಗಳೂರಿನ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಿಎಂ ರಾಜೀನಾಮೆಗೆ ಒತ್ತಾಯಿಸಲಿದೆ.
ರಿಟ್ ಅರ್ಜಿ; ರಾಜ್ಯಪಾಲರು ತನ್ನ ವಿರುದ್ಧ ತನಿಖೆ ನಡೆಸುವಂತೆ ನೀಡಿರುವ ಆದೇಶವನ್ನು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು, ಈ ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು.
ಅಭಿಷೇಕ್ ಮನು ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಸಿಎಂ ಸಿದ್ದರಾಮಯ್ಯ ಪ್ರಕರಣದ ವಕೀಲಿಕೆಯ ಹೊಣೆ ಹೊತ್ತಿದ್ದು ಅವರೊಂದಿಗೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಭೇಟಿ ನೀಗದಿಯಾಗಿದೆ.