ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಹಣ ಬೇಡಿಕೆ ಇಟ್ಟಿದ್ದು ಸಾಬೀತುಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವೆ-ನಾಟೀಕಾರ

ಮುದ್ದೇಬಿಹಾಳ : ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ತಾವು ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ತಮ್ಮ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ದಸ್ತು ಬರಹಗಾರರ ಸಂಘಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲೂಕಾ ದಸ್ತು ಬರಹಗಾರರ ಸಂಘದ ನೂತನ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಹೋರಾಟಗಾರನಿಂದ ಹಣಕ್ಕೆ ಬೇಡಿಕೆ : ಪುರಸಭೆ ಅಧ್ಯಕ್ಷ ಗೊಳಸಂಗಿ ಆರೋಪ

ಮುದ್ದೇಬಿಹಾಳ : ತಾಲ್ಲೂಕು ಪಂಚಾಯಿತಿಗೆ ಸೇರಿದ ವಸತಿ ಗೃಹಗಳನ್ನು ನೆಲಸಮಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪುರಸಭೆ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ತಾಪಂ ಕಚೇರಿ ಎದುರು ಧರಣಿ: ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿದ ತಾಪಂ ಇಒ

ಮುದ್ದೇಬಿಹಾಳ : ಗ್ರಾಮದ ದೇವತೆ ಜಾತ್ರೆಯ ಸಮಯದಲ್ಲಿ ಪಟ್ಟಣದ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಆ.12 ರಂದು ಕಿಲ್ಲಾ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಗುಗ್ಗಳ ಬಸವೇಶ್ವರ ಹಾಗೂ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಆ.12 ರಂದು ನಡೆಸಲು ಊರಿನ ದೈವದವರು ನಿರ್ಣಯ ಕೈಗೊಂಡಿದ್ದಾರೆ. ಪಟ್ಟಣದ ಕುಂಬಾರ ಓಣಿಯಲ್ಲಿರುವ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವದ ಕುರಿತ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯ ಕುರಿತು ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಯಿತು. ವೇ.ಆಯ್.ಬಿ.ಹಿರೇಮಠ ಮಾತನಾಡಿ, ಆ.12 ರಂದು ದೇವರನ್ನು ಗಂಗಸ್ಥಳಕ್ಕೆ ಕರೆದೊಯ್ಯುವುದು,9ಕ್ಕೆ ಪಿಲೇಕೆಮ್ಮ ದೇವಸ್ಥಾನದಿಂದ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ. ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು