ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇರಾನ್, ರಷ್ಯಾ ಬೆಲೆ ಏರಿಕೆ ಮಾಡಿದರೂ ನಮ್ಮಲ್ಲಿ ಸಿಲಿಂಡರ್ ಸಿಗದೇ ಇರುವ ಪರಿಸ್ಥಿತಿ ತಂದಿಟ್ಟಿದ್ದಾರೆ.ಎರಡು ಸಾವಿರ ರೂ. ಕೊಟ್ಟರೂ ಸಿಲಿಂಡರ್ ಇಂದು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.ಇವರು ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ.ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ ಮಾತನಾಡಿ, ದೇಶದ ಪ್ರಧಾನ ಮಂತ್ರಿ ನಮ್ಮ ರಾಷ್ಟçದ ಮರ್ಯಾದೆಯನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ.ದೇಶದ ನಾಗರಿಕರಿಗೆ ತಡೆಯಿಲ್ಲದಂತೆ ಸಿಲಿಂಡರ್ ಗ್ಯಾಸ್ ಪೂರೈಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಮೋದಿ ಮೋದಿ ಎಂದು ಜಪಿಸುವ ಬಿಜೆಪಿಯ ಅಂಧ ಭಕ್ತರು ಈಗ ಎಲ್ಲಿದ್ದಾರೆ ? ಮೋದಿ ಮಾಡುತ್ತಿರುವ ಕೆಲಸಗಳನ್ನು ಅವರು ತಿಳಿದುಕೊಳ್ಳಬೇಕು.ಮೋದಿ ಚಹಾ ಮಾರಿದ್ದಾರೋ ಗೊತ್ತಿಲ್ಲ.ಆದರೆ ದೇಶವನ್ನು ಮಾರುವುದಂತೂ ಗ್ಯಾರಂಟಿ ಎಂದು ಟೀಕಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ,ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಬಸವರಾಜ ಭಜಂತ್ರಿ, ಮಹ್ಮದರಫೀಕ ಶಿರೋಳ,ರಾಮಣ್ಣ ರಾಜನಾಳ, ರಾಮಣ್ಣ ನಾಯಕಮಕ್ಕಳ,ಲಕ್ಷö್ಮಣ ಲಮಾಣಿ, ಅಬ್ದುಲಸಲಾಂ ಮುಲ್ಲಾ, ಸಮೀರ ದ್ರಾಕ್ಷಿ,ಸುಜಾತಾ ಸಿಂಧೆ, ಮಾಬುಬಿ ಬಾಗವಾನ,ಶೋಭಾ ಶೆಳ್ಳಗಿ, ನೀಲಮ್ಮ ಚಲವಾದಿ,ಕಮಲಾ ಭಜಂತ್ರಿ, ಶಿವಲೀಲಾ ಬಸರಕೋಡ,ಮಮ್ತಾಜ ಮುÄಲ್ಲಾ ಮೊದಲಾದವರು ಇದ್ದರು.ಇದೇ ವೇಳೆ ಖಾಲಿ ಸಿಲಿಂಡರ್‌ಗಳಿಗೆ ಪೂಜೆ ಸಲ್ಲಿಸಿ ವೃತ್ತದಲ್ಲಿಯೆ ಕಟ್ಟಿಗೆಗಳನ್ನು ಒಲೆಯಲ್ಲಿಟ್ಟು ರೊಟ್ಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ