Protest by coalition of pro-Dalit organizations: Demand criminal case against municipal president

ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ದಲಿತಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ: ಪುರಸಭೆ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದು ಅಲ್ಲದೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ಇಲ್ಲಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಸೋಮವಾರ ತಮಟೆ ಚಳವಳಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ದಸಂಸ ಜಿಲ್ಲಾ ಸಂಚಾಲಕ ಹರೀಶ ನಾಟೀಕಾರ ಮಾತನಾಡಿ, ಪುರಸಭೆ ಅಧ್ಯಕ್ಷರು ಪದೇ ಪದೇ ಜಾತಿನಿಂದನೆ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದು ಇವರ ಮೇಲೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ತಾಲೂಕು ಪಂಚಾಯಿತಿ ವಸತಿ ಗೃಹ ನೆಲಸಮ ಮಾಡಿದ್ದು ಮತ್ತು ಸರಕಾರದ ಆಸ್ತಿಯನ್ನು ಹಾನಿ ಮಾಡಿದ್ದಾಕ್ಕಾಗಿ ಇವರ ಮೇಲೆ ಕೂಡಲೇ ಸರ್ಕಾರದಿಂದ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಇಂದಿರಾ ನಗರದಲ್ಲಿ ದಲಿತರಿಗೆ ಶೆಡ್ ನಿರ್ಮಿಸಿಕೊಳ್ಳಲು ಅನುಮತಿ ನೀಡಬೇಕು. ಶೆಡ್ ತೆರವುಗೊಳಿಸಿದ ಪುರಸಭೆ ಅಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಬೇಕು.ಪುರಸಭೆ ಅಧ್ಯಕ್ಷರ ಮೇಲೆ ದೌರ್ಜನ್ಯ, ಗೂಂಡಾ, ಕೋಮುಗಲಭೆ ಕೇಸ್ ದಾಖಲಾಗಿದ್ದು ಇವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ದಲಿತ ಸಂಘಟನೆ ನಾಯಕರಿಗೆ ತೇಜೋವಧೆ ಮಾಡಿರುವ ಇವರ ಮೇಲೆ ಮಾನನಷ್ಟ ಮೊಕದ್ದಮೆ, ಜಾತಿ ನಿಂದನೆ ಕೇಸ್ ದಾಖಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಆನಂದ ಮುದೂರ, ಬಸವರಾಜ ಸರೂರ, ಪರಶುರಾಮ ನಾಲತವಾಡ, ಸಂಜೀವ ಬಾಗೇವಾಡಿ, ಪ್ರಶಾಂತ ಕಾಳೆ, ಶಿವು ಕನ್ನೊಳ್ಳಿ, ಬಾಲಚಂದ್ರ ಹುಲ್ಲೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮನವಿ ಪತ್ರ ಸ್ವೀಕರಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ