Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ಅಕ್ರಮ ಗಣಿಗಾರಿಕೆ ಗಾಲಿ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ದೆಹಲಿ: ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಇದೀಗ ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಇದರ ಬೆನ್ನಲ್ಲೇ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ