ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಅಶೋಕ ಚಟ್ಟೇರ ಅಧ್ಯಕ್ಷರಾಗಿ ಆಯ್ಕೆ : ಬಣಜಿಗ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಬಣಜಿಗ ಸಮಾಜದ ನೂತನ ಕಾರ್ಯಕಾರಿಣಿ ಮಂಡಳಿಯನ್ನು ಸರ್ವಾನುಮತದಿಂದ ಭಾನುವಾರ ಆಯ್ಕೆ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ದೇವದುರ್ಗ ಉದ್ಯೋಗ ಖಾತ್ರಿ ಅಕ್ರಮ: ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ

ರಾಯಚೂರು,ಜೂ 15- ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ವಲಯ ವ್ಯಾಪ್ತಿ ಶಾಲೆಗಳ ಮುಖ್ಯಶಿಕ್ಷಕರ ಸಭೆ

ನಾರಾಯಣಪುರ: ಕೊಡೇಕಲ್ ಪಟ್ಟಣದ ಸರರ್ಕಾರಿ ಪ್ರೌಢಶಾಲೆಯಲ್ಲಿ ವಲಯ ವ್ಯಾಪ್ತಿಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸುರುಪುರ ಬಿಇಒ ಯಲ್ಲಪ್ಪ ಕಾಡ್ಲೂರ ಮಾತನಾಡಿ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತವರಣ ನಿರ್ಮಾಣದ ಜೊತೆಗೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವದು ಹಾಗೂ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಸೇರಿ ಅನುದಾನಿತ ಶಾಲೆಗಳಲ್ಲಿ ಸಿಗುವ ಬಿಸಿಯೂಟ, ಸಮವಸ್ತ್ರ ಪಠ್ಯಪುಸ್ತಕಗಳ ವಿತರಣೆ ಸೇರಿ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಬಿಜೆಪಿ ಸರ್ಕಾರಕ್ಕೆ 11 ವರ್ಷ: ಕೇಂದ್ರ ಸರ್ಕಾರದಿಂದಲೂ ಐದು ಕೆ.ಜಿ ಅಕ್ಕಿ- ಪಂಪಣ್ಣವರ

ಮುದ್ದೇಬಿಹಾಳ : ಜನೌಷಧಿ ಕೇಂದ್ರಗಳು, ಉಚಿತ ಅಕ್ಕಿ ಕೊಡುವ ಯೋಜನೆ, ಆಯುಷ್ಮಾನ್ ಆರೋಗ್ಯ ಕಾರ್ಡ ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ