ಯಾದಗಿರಿ: ನಗರ ಠಾಣೆಯ ಪಿಎಸ್‌ಐ ಪರಶುರಾಮ್ ತಂಕಾಸದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.
ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಸೋಮನಾಳ ಗ್ರಾಮದಿಂದ ಗುರುವಾರ ಯಾದಗಿರಿಗೆ ಆಗಮಿಸಿದ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹನುಮಂತ, ಮಾವ ವೆಂಕಟಸ್ವಾಮಿ ಹಾಗೂ ಸ್ನೇಹಿತ ಯರ್ರಿಸ್ವಾಮಿ ಮತ್ತಿತರರು ಸಿಐಡಿ ಅಧಿಕಾರಿಗಳ ಎದುರು ತಮಗೆ ತಿಳಿದ ಮಾಹಿತಿ ನೀಡಿದ್ದಾರೆ.
ಸಿಐಡಿ ಎಸ್‌ಪಿ ಋತ್ವಿಕ್ ಶಂಕರ್ ಹಾಗೂ ಡಿವೈಎಸ್ ಪಿ ಪುನೀತ್ ಹಾಗೂ ಇನ್ನಿತರ ಅಧಿಕಾರಿಗಳ ತಂಡ ಮಾಹಿತಿ ಪಡೆದಿದೆ.
ಇಲ್ಲಿನ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ಕುಟುಂಬ ಸ್ಥರಿಂದ ಮಾಹಿತಿ ಪಡೆದು, ನಂತರ ನೇರವಾಗಿ ಪೊಲೀಸ್ ವಸತಿ ಗೃಹದ ಪರಶುರಾಮ್ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿ ದ್ದಾರೆ. ಮನೆಯಲ್ಲಿ ಇಲಾಖಾ ರಿವಾಲ್ವರ್ (ಬಂದೂಕು) ವಾಕಿಟಾಕಿ ಕಂಡುಬಂದಿದೆ. 2 ಮೊಬೈಲ್‌ಗಳನ್ನೂ ಜಪ್ತಿ ಮಾಡಿದ್ದಾರೆ. ನೆಲದ ಮೇಲೆ ಬಿದ್ದಿದ್ದ ರಕ್ತದ ಕಲೆ ಹಾಗೂ ಮತ್ತಿತರ ಕೆಲ ವಸ್ತುಗಳನ್ನು ಲ್ಯಾಬ್‌ಗೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.
ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!
ಪರಿಶೀಲನೆ ವೇಳೆ 27.33 ಲಕ್ಷ ನಗದು, ಶಾಸಕರ ಚನ್ನಾರೆಡ್ಡಿ ಹೆಸರಿನ ಖಾಲಿ ಲೆಟರ್ ಹೆಡ್ ಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಪರತುರಾಮ್ ಅವರು ಸ್ವಗ್ರಾಮದಲ್ಲಿ ತಾಯಿ ಹೆಸರಲ್ಲಿನ ಪ್ರಾಟ್ ಮಾರಿ ಹಣ ಪಡೆದಿದ್ದರು ಎನ್ನಲಾಗಿದೆ.
ಕಾರಟಗಿಯಲ್ಲಿರುವ ತಮ್ಮ ಸ್ನೇಹಿತರ ಜೊತೆ ಮಾತನಾಡಿದ್ದ ಪರಕುರಾಜ್, 12 ಲಕ್ಷ ಹಣದ ಸಹಾಯ ಕೇಳಿದ್ದರು. ಒಂದು ವಾರದ ನಂತರ ಹಣ ಕೊಡುವುದಾಗಿ ಸ್ನೇಹಿತ ಹೇಳಿದಾಗ, ಅಷ್ಟರಲ್ಲೇ ನೌಕರಿ ಹೋಗುತ್ತದೆ ಎಂದಿದ್ದರು ಎಂದು ಕುಟುಂದ ಮೂಲಗಳು ತಿಳಿಸಿವೆ.