ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

Ad
Ad

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

Ad
Ad

ಪಿಎಸ್ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿ. ಅವರ ಕುಟುಂಬ ನಿರ್ವಹಣೆಗೆ ನನ್ನ ಎರಡು ತಿಂಗಳ ಶಾಸಕ ಸಂಬಳ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ. ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು ಅವೈಜ್ಞಾನಿಕ. ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.‌ ಗೃಹ ಇಲಾಖೆ ಹಾಗೂ‌ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,