ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

ಮುದ್ದೇಬಿಹಾಳ : ಯಾರೇ ದೌರ್ಜನ್ಯ ಮಾಡಿದರೂ ಕಾಯುವುದು ದೇವರಲ್ಲ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಎಂಬುದನ್ನು ಅರಿತುಕೊಳ್ಳಬೇಕು ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಹೇಳಿದರು.

ತಾಲೂಕಿನ ಹಿರೇಮುರಾಳ ಗ್ರಾಮದ ಅಂಬೇಡ್ಕರ್ ಸರ್ಕಲ್ ಹತ್ತಿರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿ ಇಡದೆ ಆಚರಣೆಯಲ್ಲಿ ಇಡಬೇಕು. ಅಂಬೇಡ್ಕರ್‌ರು ಸರ್ವ ಜನಾಂಗಕ್ಕೆ ನಾಯಕರು.ನಾವು ಸ್ವತಂತ್ರವಾಗಿ ಬದಕಬೇಕಾಗಿದ್ದರೆ ಅದು ಡಾ.ಅಂಬೇಡ್ಕರ್ ಬರೆದ ಸಂವಿಧಾನದಿAದ ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷ ದೇವೇಂದ್ರಪ್ಪ ಬೆಳ್ಳಿಕಟ್ಟಿ,ಯುವ ಮುಖಂಡ ಗಿರೀಶಗೌಡ ಪಾಟೀಲ್, ಬಸವಂತರಾಯ ನಾಗರತ್ತಿ, ಅಂಬೇಡ್ಕರ್ ಸೇನೆ ತಾಲ್ಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಬಸವರಾಜ ಸರೂರ,ರೇವಣಸಿದ್ದಪ್ಪ ಮುರಾಳ, ಅಲ್ಲಿಸಾಬ ಸುರಪೂರ, ನಿಂಗಣ್ಣ ಜಾಲವಾದಿ, ಅಪ್ಪು ಧನ್ನೂರ, ಅಪ್ಪು ಚಲವಾದಿ, ಯಮನಪ್ಪ ಛಲವಾದಿ, ಯಲ್ಲಪ್ಪ ಛಲವಾದಿ, ಬೈಲಪ್ಪ ಛಲವಾದಿ , ಪೀರಸಾಬ್ ಮುಲ್ಲಾ, ಶರಣು ಛಲವಾದಿ, ಪವಾಡೆಪ್ಪ ಛಲವಾದಿ ಹಲವರು ಇದ್ದರು.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ