Quiz competition for high school students: Knowledge of Kannada should be developed among students - Biradara

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಕನ್ನಡವೆಂಬುದು ಹೃದಯದ ಭಾಷೆಯಾಗಿದೆ. ಅದನ್ನು ಯಾರೂ ಎಂದಿಗೂ ಮರೆಯಬಾರದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವದರಿಂದ ಜೀವನದಲ್ಲಿ ಉತ್ತಮ ಸ್ಥಾನವನ್ನು ಸಾಧಿಸಲು ಸಾಧ್ಯ ಟಿವ್ಹಿ ಫೋನ್‌ನಲ್ಲಿ ಹೆಚ್ಚು ಸಮಯವನ್ನು ಕಳೆಯದೇ ಅಧ್ಯಯನದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರೆ ನಮ್ಮ ಮಾತೃಭಾಷೆಯಾದ ಕನ್ನಡದ ಭಗ್ಗೆ ಗೌರವವನ್ನು ಹೆಚ್ಚಿಸಬಹುದಾಗಿದೆ. ಅದಕ್ಕಾಗಿ ಕಸಾಪ ವತಿಯಿಂದ ಮಕ್ಕಳಿಗಾಗಿ ರಸಪ್ರಶ್ನೆ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ದಿಕ ಮಟ್ಟದ ಸಾಮರ್ಥ್ಯವನ್ನು ಹೆಚ್ಚಿಸಲು ಕನ್ನಡದ ಸಾಹಿತ್ಯದ ಭಗ್ಗೆ ಅಭಿಮಾನವನ್ನು ಬೆಳೆಸುವಲ್ಲಿ ಇಂತಹ ಕನ್ನಡದಲ್ಲಿ ರಸಪ್ರಶ್ನೆ ಸ್ಪರ್ಧೆ ಸಹಕಾರಿಯಾಗಿದೆ ಎಂದು ಹೇಳಿದರು.

ಪುರಸಭಾ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ಮಾತನಾಡಿ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪಟ್ಟಣದಲ್ಲಿ ಹೆಚ್ಚು ನಡೆಯಬೇಕು ಇದು ಮಕ್ಕಳ ಕಲಿಕೆಯನ್ನು ಪರಿಣಾಮಕಾರಿಯನ್ನಾಗಿಸುವದ ಜೊತೆಗೆ ಕನ್ನಡದ ಭಗ್ಗೆ ನಮ್ಮ ಸಂಸ್ಕೃತಿಯ ಭಗ್ಗೆ ಅರಿಯಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹೆಚ್.ಪಿ. ಹಡಪದ ಅವರು ನಿರ್ವಹಣೆ ಮಾಡಿದರು.

ಹಿರಿಯ ಸಾಹಿತಿ ಅಶೋಕ ಮಣಿ, ಶಂಕರ ಬೇವಿನಗಿಡದ, ಮಹಿಬೂಬ ಮುಲ್ಲಾ, ಕಸಾಪ ಗೌರವ ಸಲಹೆಗಾರರಾದ ಪ್ರಭುರಾಜ ಕಲ್ಬುರ್ಗಿ, ಗೌರವ ಕಾರ್ಯದರ್ಶಿಗಳಾದ ವೈ.ಎಚ್. ವಿಜಯಕರ, ಸಿದ್ದನಗೌಡ ಬಿಜ್ಜೂರ, ಪ್ರೋ. ಹಂಪಣ್ಣ, ಮಹಿಬೂಬ ಮುಲ್ಲಾ, ಗೌರವ ಕೋಶಾಧ್ಯಕ್ಷರಾದ ಜಹಾಂಗೀರ ಮುಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಹುಸೇನ ಬಾದಶಾ ಮುಲ್ಲಾ, ರಾಜು ಬಳ್ಳೊಳ್ಳಿ, ರಾಜು ಕಲಬುರ್ಗಿ, ಚಂದ್ರು ಕಲಾಲ, ಹರೀಶ ಬೇವೂರ, ಸಿದ್ದನಗೌಡ ಕಾಶಿನಕುಂಟಿ, ರಾಚಯ್ಯ ಹಿರೇಮಠ, ಶ್ರೀಶೈಲ ಕತ್ತಿ, ಹುಸೇನ್ ಮುಲ್ಲಾ, ಹಾಗೂ ಮುಖಂಡರು ಕನ್ನಡ ಸಾಹಿತ್ಯಾಭಿಮಾನಿಗಳು ಹಾಗೂ ಕಸಾಪ ಪದಾಧಿಕಾರಿಗಳು ಉಪಸ್ತಿತರಿದ್ದರು.

ಪ್ರಶಸ್ತಿ ವಿಜೇತ ತಂಡ: ಪ್ರಥಮ ಬಹುಮಾನ ಪ್ರಾರ್ಥನಾ ವಿದ್ಯಾಮಂದಿರ(ಮಾಸ್ತಿ ವೆಂಕಟೇಶ ಅಯ್ಯಂಗಾರ್ ತಂಡ), ದ್ವಿತೀಯ ಬಹುಮಾನ ಚಿನ್ಮಯಿ ಜೆಸಿ(ಗಿರೀಶ ಕಾರ್ನಾಡ್ ತಂಡ), ತೃತೀಯ ಬಹುಮಾನ ಶ್ರೀ ಶಾರದಾ ವಿದ್ಯಾಮಂದಿರ(ಚಂದ್ರಶೇಖರ ಕಂಬಾರ ತಂಡ) ಪದಕ ಹಾಗೂ ಟ್ರೋಫಿಗಳನ್ನು ಪಡೆದುಕೊಂಡವು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಥಳೀಯ ಹಾಗೂ ಸುತ್ತಮುತ್ತಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ