R Ashok: President's rule should be brought in Karnataka: Leader of Opposition

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಆದರೆ ಅವರು ಕಲ್ಲು ಹೊಡೆಯಿರಿ, ಟಯರ್‌ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು R Ashok ಹೇಳಿದೆರು.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಲೂಟಿಕೋರರಾಗಿದ್ದು, ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕೆಂದು ಜನರು ಹೇಳುತ್ತಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದಿದ್ದರೂ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕಳ್ಳತನ ಮಾಡಿದ್ದಾರೆ, ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮುಖ್ಯಮಂತ್ರಿಯವರು ಶಾಸಕಾಂಗ ಪಕ್ಷದ ಬೆಂಬಲವನ್ನು ತೋರಿಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆಯಲ್ಲಿ ಮುಡಾ ಹಗರಣ ಕುರಿತು ಬಿಜೆಪಿ ಚರ್ಚಿಸಲು ಮುಂದಾದಾಗ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ. ಅಲ್ಲಿ 224 ಶಾಸಕರು, ಮಾಧ್ಯಮಗಳು, ಅಧಿಕಾರಿಗಳಿದ್ದರೂ, ಉತ್ತರ ನೀಡಲಿಲ್ಲ. ವಿರೋಧ ಪಕ್ಷವಾಗಿ ಕರ್ತವ್ಯದಂತೆ ಬಿಜೆಪಿ ಪಾದಯಾತ್ರೆ ಮಾಡಿದೆ. ಆದರೆ ಸರ್ಕಾರದ ಅಧಿಕಾರ ಬಳಸಿಕೊಂಡು ಕಾಂಗ್ರೆಸ್‌ ಸಮಾವೇಶ ಮಾಡಿದೆ. ಇದನ್ನು ಸರ್ಕಾರ ಎನ್ನುತ್ತಾರೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಕಾಂಗ್ರೆಸ್‌ ಸರ್ಕಾರದ ಹಗರಣದ ಕುರಿತು ಬಿಜೆಪಿ, ಜೆಡಿಎಸ್‌ ಮಾತ್ರ ಪ್ರತಿಭಟಿಸುತ್ತಿಲ್ಲ. ಮಾಧ್ಯಮಗಳು ನಮಗಿಂತ ಮೊದಲೇ ಹಗರಣದ ತನಿಖೆಯ ಸುದ್ದಿಗಳನ್ನು ಪ್ರಕಟ ಮಾಡಿವೆ. ಜನರಿಗೂ ಈಗ ಸರ್ಕಾರದ ಮೇಲೆ ಅನುಮಾನ ಬಂದಿದೆ. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಟಿ.ಜೆ.ಅಬ್ರಹಾಂ ಕೋರಿದ್ದಾರೆಯೇ ಹೊರತು ಬಿಜೆಪಿ ಕಾರ್ಯಕರ್ತರು ಕೋರಿಕೆ ಸಲ್ಲಿಸಿಲ್ಲ. ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು ಸರ್ಕಾರ ವಜಾ ಮಾಡಿಲ್ಲ ಎಂದರು.

ಬಿ.ಎಸ್‌.ಯಡಿಯೂರಪ್ಪ, ಎಲ್‌.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದರು.

ರಾಜ್ಯಪಾಲರ ಚಿತ್ರ ಸುಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಕಳೆದ ವರ್ಷ ಮಾಡಿದ ಪ್ರತಿಭಟನೆಗೆ ಈಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ದ್ವೇಷ ರಾಜಕಾರಣ ಮಾಡುವ ಕಾಂಗ್ರೆಸ್‌ ನಾಯಕರು ಎಷ್ಟು ದಿನ ಅಧಿಕಾರದಲ್ಲಿರುತ್ತಾರೆ? ಅನ್ಯಾಯದ ವಿರುದ್ಧ, ಜನರ ಪರವಾಗಿ ಹೋರಾಡುವ ಹಕ್ಕು ವಿರೋಧ ಪಕ್ಷದಲ್ಲಿರುವ ಎಲ್ಲ ಶಾಸಕರಿಗೂ ಇದೆ. ಬಿಜೆಪಿ ಕೂಡ ಕಾನೂನು ಪ್ರಕಾರ ಮುಂದೆ ಹೆಜ್ಜೆ ಇಡಲಿದೆ ಎಂದರು.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ