ದೆಹಲಿ: ಹಿಂಡೆನ್ ಬರ್ಗ್ ವರದಿ ಆಧರಿಸಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಅಪಾಯವಿದೆ ಎಂದು ನಿಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯವಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ (Rahul vs Modi) ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಸುದ್ದಿಗಾರರೊಂದಿಗೆ ಭಾರತೀಯ ಷೇರುಪೇಟೆ ಕುರಿತು ಹಿಂಡೆನ್ ಬರ್ಗ್ ನೀಡಿರುವ ವರದಿ ಕುರಿತು ಮಾತನಾಡಿದ ಅವರು, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆಗಳು ರಾಜಿ ಮಾಡಿಕೊಳ್ಳುತ್ತವೆ ಎಂದು ಆರೋಪಿಸಿದ್ದಾರೆ.
Join Our Telegram: https://t.me/dcgkannada
ಅದಾನಿ ಸಮೂಹದ ವಿರುದ್ಧದ ಸಾಗರೋತ್ತರ ವ್ಯವಹಾರವು ಕಾನೂನು ಬಾಹಿರವಾಗಿದೆ ಎಂಬ ಆರೋಪ ದೊಡ್ಡಮಟ್ಟದಲ್ಲಿ ಕೇಳಿ ಬಂದಿದೆ. ಅಷ್ಟೇ ಅಲ್ಲದೇ SEBI ಅಧ್ಯಕ್ಷೆ ಮಾಧಬಿ ಬುಚ್ ಮತ್ತು ಅವರ ಪತಿಯು ಈ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಹಿಂಡೆನ್ ಬರ್ಗ್ ಆರೋಪಿಸಿದೆ ಎಂದು ವಾದ ಮಾಡಿದ್ದಾರೆ.
ದೇಶಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಈ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ? ಸೆಬಿ ಅಧ್ಯಕ್ಷರೇ ಅಥವಾ ಗೌತಮ್ ಅದಾನಿಯೇ? ಎಂದು ಖಡಕ್ ಆಗಿ ಪ್ರಶ್ನೆ ಎತ್ತಿದ್ದಾರೆ.
ಇದನ್ನೂ ಓದಿ: BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!
ಆರೋಪ ಬಂದ ಮೇಲೆ ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಲಿಲ್ಲ? ಈ ವಿಷಯವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ತನಿಖೆಗೆ ಮುಂದಾಗುತ್ತದಾ ಎಂದು ಪ್ರಶ್ನಿಸಿದ್ದಾರೆ.
ಈ ಮೂಲಕ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ (RAHUL vs Modi) ಅವರ ಸರ್ಕಾರಕ್ಕೆ ಉತ್ತಮ ಆಡಳಿತ ನೀಡಿ ಎಂದು ಎಚ್ಚರಿಕೆ ನೀಡಿದ್ದಾರೆ.