Raichur: Distribution of smart cards to various categories of unorganized workers

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ನೋಡುವಂತಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಅ.15ರಂದು ನಡೆದ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಣ್ಣ ಸಣ್ಣ ಕಸುಬು ಮಾಡುವ 101 ವರ್ಗದ ಕಾರ್ಮಿಕರು ದೇಶದ ದುಡಿಯುವ ವರ್ಗದಲ್ಲಿ ಶೇ.83ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರು ಅಸಂಘಟಿತ ವಲಯದಲ್ಲಿ ಇರುವುದಾಗಿ ಅಂದಾಜಿಸಿದ್ದು, ಶಾಸನಬದ್ದ ಸೌಲಭ್ಯಗಳಿಂದ ವಂಚಿತರಾಗಿರುವ ಸಂಭವ ಹೆಚ್ಚಾಗಿದೆ. ಇವರ ಜೀವನಮಟ್ಟ ಉತ್ತಮಪಡಿಸಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ನಾವು ಶ್ರಮಿಸುತ್ತಿದ್ದೇವೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ದುರ್ಬಲರಾದ ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಭಾವಿಸಿ ಮಂಡಳಿಯು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಅನೇಕ ಸಾಮಾಜಿಕ ಭದ್ರತಾ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 101 ಅಸಂಘಟಿತ ವರ್ಗಗಳ ಸುಮಾರು 30 ರಿಂದ 40 ಲಕ್ಷ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡುತ್ತಿದ್ದೇವೆ. ಈವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೋಂದಣಿಯಾಗಿದ್ದು, ರಾಯಚೂರು ಜಿಲ್ಲೆಯಲ್ಲಿ 58,240 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಇತ್ತೀಚೆಗೆ ರಾಜ್ಯದಲ್ಲಿ ಗಿಗ್ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು, ಈ ಕಾರ್ಮಿಕರಿಗೆ ಮುಂದಿನ ದಿನಗಳಲ್ಲಿ ಸಾಮಾಜಿಕ ಭದ್ರತೆ ನೀಡುತ್ತೇವೆ. ರಾಜ್ಯದಲ್ಲಿ ದಿನಪತ್ರಿಕೆ ವಿತರಣಾ ಕಾರ್ಮಿಕರು ಎಂದು 6047 ಜನರನ್ನು ನೋಂದಾಯಿಸಿದ್ದು, ಇವರಿಗೆ 2 ಲಕ್ಷ ಅಪಘಾತ ಪರಿಹಾರ ಮತ್ತು 1 ಲಕ್ಷ ವೈದ್ಯಕೀಯ ಸೌಲಭ್ಯ ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಾವು ಎರಡನೇ ಬಾರಿಗೆ ಸಚಿವರಾಗಿದ್ದು, ಈ ಬಾರಿ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಕಾರ್ಮಿಕ ಸಚಿವರಾಗಿ ಉತ್ತಮ ಕಾರ್ಯ ಮಾಡಿದ್ದಾಗಿ ಹೇಳಿದರು.

ಜಾಗೃತಿ ಕಾರ್ಯಕ್ರಮಕ್ಕೆ ಸೂಚನೆ: ಪ್ರತಿ 1 ಗಂಟೆಗೆ ಆರು ಜನರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗುತ್ತಾರೆ ಎನ್ನುವ ಆತಂಕಕಾರಿ ಅಂಕಿಅಂಶಗಳ ವರದಿ ಇದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾಳಜಿ ವಹಿಸಿ ಪ್ರತಿ ಮಾಹೆ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆ ಸ್ಥಾಪನೆಗೆ ಹೋರಾಟ: ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರ ಕೋರಿಕೆಯಂತೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮವಹಿಸಿ ರಾಯಚೂರು ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆ ಸ್ಥಾಪನೆಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಸಚಿವರು ಇದೆ ವೇಳೆ ತಿಳಿಸಿದರು.

ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆ ಮಂಜೂರಾತಿಗೆ ಶಾಸಕರ ಒತ್ತಾಯ: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ಅಂದಾಜು 400 ಕಾರ್ಖಾನೆಗಳಿವೆ. ಇಲ್ಲಿ ಕೆಲಸ ಮಾಡುವ ಸಾವಿರಾರು ಸಂಖ್ಯೆಯ ಕಾರ್ಮಿಕರಿಗೆ ಇಎಸ್ಐ ಸೌಕರ್ಯ ಸಿಗುವ ನಿಟ್ಟಿನಲ್ಲಿ ರಾಯಚೂರು ಜಿಲ್ಲೆಗೆ ಇಎಸ್ಐ ಆಸ್ಪತ್ರೆಯ ಮುಖ್ಯ ಶಾಖೆಯನ್ನು ಮಂಜೂರು ಮಾಡಲು ಮಾನ್ಯ ಕಾರ್ಮಿಕ ಸಚಿವರು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ತಿರುಗಿ ನೋಡುವ ರೀತಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಸಾಕಷ್ಟು ಶ್ರಮವಹಿಸುವ 101 ವರ್ಗಗಳ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸ್ಮಾರ್ಟ ಕಾರ್ಡ ವಿತರಣೆಗೆ ಕ್ರಮವಹಿಸಿರುವುದು ಶ್ಲಾಘನೀಯ ಸಂಗತಿ. ಬಡವರು, ಕಾರ್ಮಿಕರ ಬಗ್ಗೆ ಸಂತೋಷ ಲಾಡ್ ಅವರಿಗೆ ಇರುವ ಕಾಳಜಿ ನಿಜಕ್ಕು ಅಭಿನಂದನಾರ್ಹವಾದುದು ಎಂದು ತಿಳಿಸಿದರು.

ಶಾಸಕರಾದ ಹಂಪಯ್ಯ ನಾಯಕ ಅವರು ಮಾತನಾಡಿ, ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ರಾಜ್ಯಾದ್ಯಂತ ಸುತ್ತಿ, ಕಾರ್ಮಿಕ ವರ್ಗದ ನಾಡಿಮಿಡಿತ ಅರಿತು ಕಾರ್ಮಿಕರಿಗೆ ಅನುಕೂಲವಾಗುವ ರೀತಿಯ ಅನೇಕ ಯೋಜನೆಗಳ ಜಾರಿ ಮಾಡಿದ್ದಾರೆ ಎಂದರು.
ಶಾಸಕರಾದ ಬಸನಗೌಡ ದದ್ದಲ್ ಅವರು ಮಾತನಾಡಿದರು.

ಸಮಾರಂಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಕಾರ್ಮಿಕ ಆಯುಕ್ತರು ಹಾಗೂ ರಾಜ್ಯ ವಿಮಾ ಯೋಜನಾ ವೈದ್ಯಕೀಯ ಸೇವೆಗಳು ಆಯುಕ್ತರಾದ ಡಾ.ಎಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಎಸ್ ಪಿ ರವಿಕುಮಾರ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಪೂಜಾರ, ಜಿಲ್ಲಾ ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಪ್ರಿಯಾಂಕ ಭಾಸತ್ಕರ ಅವರು ಇದ್ದರು.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು