Rain forest: Gujarat achieved a thrilling victory

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3 ವಿಕೆಟ್‌ ಗೆಲುವು ಸಾಧಿಸಿತು.

ಮುಂಬೈನ ವಾಖಂಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ಜರುಗಿತ್ತು. ಟಾಸ್ ಗೆದ್ದು ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ ಕಲೆ ಹಾಕಿತು. 156 ರನ್ ಗಳ ಗುರಿ ಬೆನ್ನತ್ತಿದ್ದ ಗುಜರಾತ್‌ ತಂಡ, ಸುಲಭವಾಗಿ ಗೆಲುವು ಪಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಮುಂಬೈನ ಶಿಸ್ತುಬದ್ದ ದಾಳಿಯ ನಡುವೆಯೂ ಗುಜರಾತ್ ತಂಡ ರೋಚಕ ಜಯ ಸಾಧಿಸಿದೆ.

ಗುಜರಾತ್‌ ತಂಡ 18 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 132 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಗುಜರಾತ್ ಗೆ ಕೊನೆಯ 12 ಎಸೆತಗಳಲ್ಲಿ 24 ರನ್‌ ಅಗತ್ಯವಿತ್ತು. ಈ ವೇಳೆ ಎರಡನೇ ಬಾರಿ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ 15 ರನ್‌ ಅಗತ್ಯವಿತ್ತು. ಕೊನೆಯ ಓವರ್‌ನಲ್ಲಿ ದೀಪಕ್‌ ಚಹರ್‌ಗೆ ರಾಹುಲ್‌ ತೆವಾಟಿಯಾ ಬೌಂಡರಿ ಸೇರಿ 5 ರನ್‌ ಗಳಿಸಿದರೆ, ಜೆರಾಲ್ಡ್‌ ಕೋಯೆಡ್ಜಿ ಸಿಕ್ಸರ್‌ ಬಾರಿಸಿದ್ದರು. ನಂತರ ಕೊನೆಯ ಎರಡು ಎಸೆತಗಳಲ್ಲಿ ಒಂದು ರನ್‌ ಬೇಕಿದ್ದಾಗ ಕೊಯೆಡ್ಜಿ ವಿಕೆಟ್‌ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ಅರ್ಷದ್‌ ಒಂದು ರನ್‌ ಗಳಿಸಿ ಗುಜರಾತ್‌ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಗುಜರಾತ್ 19 ಓವರ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು 147 ರನ್‌ಗಳನ್ನು ಗಳಿಸಿ ಗೆದ್ದು ಬೀಗಿತು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು