ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ (Rain report) ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ರಾಜಧಾನಿ ಬೆಂಗಳೂರಿನಲ್ಲೂ ಸೆ.3ರವರೆಗೆ ಧಾರಾಕಾರ ಮಳೆಯಾಗುವ ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಗೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ರಾತ್ರಿ ಹಾಗೂ ನಾಳೆಯೂ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್ ಜಿಲ್ಲೆ ರಾಯಚೂರು, ಯಾದಗಿರಿ, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೇ ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಆರೆಂಜ್ ಅರ್ಲಟ್ ಘೋಷಿಸಲಾಗಿದೆ.
ಇದನ್ನೂ ಓದಿ: Gold Theft: ತಂಗಿ ಮನೆಯಲ್ಲಿ ಚಿನ್ನ ಕದ್ದ ಅಕ್ಕ!
ಈ ಜಿಲ್ಲೆಯಲ್ಲಿ ರಾತ್ರಿ ಭಾರೀ ವರ್ಷಧಾರೆಯಾಗುವ ಸೂಚನೆ ಇದೆ. ವಿಜಯಪುರ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ (Rain report) ಮಾಡಲಾಗಿದೆ.