ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ಇನ್ನಷ್ಟು ಅಬ್ಬರಿಸಲಿದ್ದಾನೆ (Rain update) ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.
Join Our telegram: https://t.me/dcgkannada
ಇಂದಿನಿಂದ ಆಗಸ್ಟ್ 27ರವರೆಗೆ ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಪ್ಪಳ, ರಾಯಚೂರು, ಯಾದಗಿರಿ,, ದಾವಣಗೆರೆ, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ತುಮಕೂರು, ಕೋಲಾರ, ಕಲಬುರಗಿ, ವಿಜಯನಗರ, ಬಳ್ಳಾರಿ, ಬೆಳಗಾವಿ, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಗುಡುಗು ಸಹಿತ ಭಾರೀ ಮಳೆಯಾಗಲಿದ್ದು (Rain update), ಮುಂದಿನ 7 ದಿನಗಳವರೆಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಇದನ್ನೂ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!
ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ ಈ ಭಾಗಗಳಲ್ಲಿ 24 ಗಂಟೆಗಳಲ್ಲಿ ಮತ್ತು ಮುಂದಿನ ಒಂದು ವಾರ ಸಾಧಾರಣ ಮಳೆ ಆಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.