Rameshwaram cafe blast: BJP office blast attempt

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣದ (Rameshwaram cafe blast) ನಾಲ್ವರು ಆರೋಪಿಗಳಾದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹಮದ್ ತಾಹಾ, ಮಾಜ್ ಮುನೀರ್ ಅಹಮದ್ ಹಾಗೂ ಮುಜಾಮಿಲ್ ಷರೀಫ್ ವಿರುದ್ಧ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್ ಸಲ್ಲಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ‌ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ದಂದೇ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸ್ಪೋಟಿಸಲು ಯತ್ನಿಸಿ ವಿಫಲವಾಗಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಿದ್ದರು ಎಂಬ ಅಂಶ ಚಾಜ್ ೯ಶೀಟ್‌ನಲ್ಲಿ ಬಹಿರಂಗವಾಗಿದೆ.

ಮುಸ್ಲಿಂ ಯುವಕರೇ ಐಸಿಸ್‌ನ ಟಾರ್ಗೆಟ್:

ಶಿವಮೊಗ್ಗ ಮೂಲದವರಾಗಿದ್ದ ಮಸಾವಿರ್ ಹುಸೇನ್ ಶಾಜೀಬ್, ಅಬ್ದುಲ್ ಮತೀನ್ ಅಹ ಮದ್ ತಾಹಾ ಐಸಿಸ್‌ನಿಂದ ಪ್ರೇರಿತರಾ ಗಿದ್ದು, ಮುಸ್ಲಿಂ ಯುವಕರನ್ನು ಐಸಿಸ್‌ನತ್ತ ಸೆಳೆಯುತ್ತಿ ದ್ದರು. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಹಾಗೂ ಮುಜಾ ಮಿಲ್ ಷರೀಫ್‌ನನ್ನು ಸಹ ಅದೇ ರೀತಿ ಐಸಿಸ್‌ನ ವಿಚಾರಗಳೆಡೆಗೆ ಸೆಳೆಯ ಲಾಗಿತ್ತು.

ಆರೋಪಿಗಳು ಭಾರತದ ಸಿಮ್ ಕಾರ್ಡ್‌ಗಳು, ಭಾರತೀಯ ಬ್ಯಾಂಕ್ ಖಾತೆ ಹಾಗೂ ಡಾರ್ಕ್ ವೆಬ್ ಬಳಸಿ ಸೃಷ್ಟಿಸಿದ ಭಾರತ ಹಾಗೂ ಬಾಂಗ್ಲಾದೇಶದ ಗುರುತಿನ ಚೀಟಿಗಳನ್ನು ಹೊಂದಿದ್ದರು ಎಂದು ಚಾಜ್‌ಶೀಟ್‌ನಲ್ಲಿ ವಿವರಿಸಲಾಗಿದೆ.

ಏನಿದು ಪ್ರಕರಣ?

ಬೆಂಗಳೂರಿನ ಐಟಿಪಿಎಲ್‌ ರಸ್ತೆಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಐಇಡಿ ಬಳಸಿ ಸ್ಪೋಟಿಸಲಾಗಿತ್ತು. ಸ್ಪೋಟದ ತೀವ್ರತೆಗೆ ಗ್ರಾಹಕರು, ಕೆಫೆ ಸಿಬ್ಬಂದಿ ಸಹಿತ 9 ಜನರು ಗಾಯಗೊಂಡಿ ದ್ದರು. ಬಳಿಕ ಪ್ರಕರಣದ ತನಿಖೆ ಆರಂಭಿ ಸಿದ್ಧ ಎನ್‌ಐಎ, ಆರೋಪಿ ಮಸಾವಿರ್‌ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮತೀನ್ ಅಹಮದ್ ತಾಹಾನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಿತ್ತು.

ಇದನ್ನು ಓದಿ: ಮೂರು ಮಸೂದೆಗಳಿಗೆ ಅಂಕಿತ, ಇನ್ನೇರಡು ಬಾಕಿ

ಸ್ಫೋಟದ ಬಳಿಕ ನಾಪತ್ತೆಯಾಗಿದ್ದ ಆರೋಪಿಗಳನ್ನು ಬರೋಬ್ಬರಿ 42 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು